ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಮೇಲಿನ ನಿರ್ಬಂಧ ಸಡಲಿಸಿದ ಆರ್.ಬಿ.ಐ

ಅಕ್ರಮ ಹಣಕಾಸು ವಹಿವಾಟು ಹಿನ್ನೆಲೆಯಲ್ಲಿ ನಿರ್ಬಂಧ ಹೇರಲಾಗಿದ್ದ ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಲಿ. (ಪಿಎಂಸಿ) ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಅಲ್ಪ ಪ್ರಮಾಣದಲ್ಲಿ ನಿರ್ಬಂಧ ಸಡಲಿಸಿದೆ. 
ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಮೇಲಿನ ನಿರ್ಬಂಧ ಸಡಲಿಸಿದ ಆರ್.ಬಿ.ಐ
ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಮೇಲಿನ ನಿರ್ಬಂಧ ಸಡಲಿಸಿದ ಆರ್.ಬಿ.ಐ

ಮುಂಬೈ: ಅಕ್ರಮ ಹಣಕಾಸು ವಹಿವಾಟು ಹಿನ್ನೆಲೆಯಲ್ಲಿ ನಿರ್ಬಂಧ ಹೇರಲಾಗಿದ್ದ ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಲಿ. (ಪಿಎಂಸಿ) ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಅಲ್ಪ ಪ್ರಮಾಣದಲ್ಲಿ ನಿರ್ಬಂಧ ಸಡಲಿಸಿದೆ. 

ಆರ್.ಬಿ.ಐ ಈ ಕುರಿತು ಪ್ರಕಟಣೆ ನೀಡಿದ್ದು, ಪಿಎಂಸಿ ಬ್ಯಾಂಕ್‌ನಲ್ಲಿ ಖಾತೆ ಹೊಂದಿರುವ ಗ್ರಾಹಕರು ತಮ್ಮ ಖಾತೆಯಿಂದ 40 ಸಾವಿರ ರೂಪಾಯಿವರೆಗೂ ಹಣ ಹಿಂತೆಗೆಯಬಹುದು ಎಂದು ಆರ್‌ಬಿಐ ತಿಳಿಸಿದೆ. 

ಈ ಮೊದಲು 25 ಸಾವಿರ ರೂಪಾಯಿ ಹಿಂಪಡೆಯಲು ಮಾತ್ರ ಅನುಮತಿ ಇತ್ತು. ಕಳೆದ ತಿಂಗಳು ಈ ಬ್ಯಾಂಕ್ ಮೇಲೆ ಕೆಲವು ನಿರ್ಬಂಧಗಳನ್ನು ವಿಧಿಸಿದ ನಂತರ ಆರ್‌ಬಿಐ ವಿತ್ ಡ್ರಾ ಮಿತಿಯನ್ನು ಮೂರನೇ ಬಾರಿಗೆ ಹೆಚ್ಚಳ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com