ಅಮೆರಿಕ ಫೆಡರಲ್ ಬ್ಯಾಂಕ್ ನಿರ್ಣಯದ ಎಫೆಕ್ಟ್; ರೂಪಾಯಿ ಮೌಲ್ಯ ಕುಸಿತ

ಅಮೆರಿಕ ಫೆಡರಲ್ ಬ್ಯಾಂಕ್ ಸಂಸ್ಥೆ ತನ್ನ ಬಡ್ಡಿದರದ ಕುರಿತು ನಿರ್ಣಯ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಭಾರತೀಯ ರೂಪಾಯಿ ಮೌಲ್ಯದಲ್ಲಿ ಕುಸಿತಕಂಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮುಂಬೈ: ಅಮೆರಿಕ ಫೆಡರಲ್ ಬ್ಯಾಂಕ್ ಸಂಸ್ಥೆ ತನ್ನ ಬಡ್ಡಿದರದ ಕುರಿತು ನಿರ್ಣಯ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಭಾರತೀಯ ರೂಪಾಯಿ ಮೌಲ್ಯದಲ್ಲಿ ಕುಸಿತಕಂಡಿದೆ.

ಇಂದು ಬೆಳಗ್ಗೆ ಮಾರುಕಟ್ಟೆ ಆರಂಭವಾಗುತ್ತಿದ್ದಂತೆಯೇ ರೂಪಾಯಿ ಮೌಲ್ಯದಲ್ಲಿ ಸುಮಾರು 11 ಪೈಸೆಯಷ್ಟು ಕುಸಿತ ಕಂಡುಬಂದಿದೆ. ಆ ಮೂಲಕ ಪ್ರಸ್ತುತ ಡಾಲರ್ ಎದುರು ರೂಪಾಯಿ  70.95 ರೂಗೆ ಕುಸಿತಕಂಡಿದೆ.

ರೂಪಾಯಿ ಮೌಲ್ಯ ಕುಸಿತಕ್ಕೆ ಅಮೆರಿಕ ಫೆಡರಲ್ ಬ್ಯಾಂಕ್ ನಿರ್ಣಯ ಕಾರಣ ಎಂದು ಹೇಳಲಾಗುತ್ತಿದ್ದು, ಇಂದು ಅಮೆರಿಕ ಫೆಡರಲ್ ಬ್ಯಾಂಕ್ ಸಂಸ್ಥೆ ತನ್ನ ಬಡ್ಡಿದರದ ಕುರಿತು ಮಹತ್ವದ ನಿರ್ಣಯ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಗೆ ಬೇಡಿಕೆ ಹೆಚ್ಚಾಗಿದೆ. ಇದರ ಪರಿಣಾಮ ಭಾರತೀಯ ಷೇರುಮಾರುಕಟ್ಟೆಯ ಮೇಲೂ ಆಗಿದ್ದು, ರೂಪಾಯಿ ಮೌಲ್ಯದಲ್ಲಿ 11 ಪೈಸೆಯಷ್ಟು ಕುಸಿತವಾಗಿದೆ.

ಮಂಗಳವಾರದ ವಹಿವಾಟಿನ ಅಂತ್ಯಕ್ಕೆ ರೂಪಾಯಿ ಮೌಲ್ಯ ಪ್ರತೀ ಡಾಲರ್ ಗೆ 70.84ರೂಗಳಷ್ಟಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com