ತಕ್ಷಣದಿಂದ ಜಾರಿಗೆ ಬರುವಂತೆ ಈರುಳ್ಳಿ ರಫ್ತು ನಿಷೇಧಿಸಿದ ಸರ್ಕಾರ!

ತಕ್ಷಣದಿಂದಲೇ ಜಾರಿಗೆ ಬರುವಂತೆ ಈರುಳ್ಳಿ ರಪ್ತುನ್ನು ನಿಷೇಧಿಸಿ ಕೇಂದ್ರ ಸರ್ಕಾರ ಇಂದು ಆದೇಶ ಹೊರಡಿಸಿದೆ. ಕೂಡಲೇ ಜಾರಿಗೆ ಬರುವಂತೆ ಎಲ್ಲಾ ರೀತಿಯ ಈರುಳ್ಳಿ ರಪ್ತುನ್ನು ನಿಷೇಧಿಸಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಆದೇಶ ಹೊರಡಿಸಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ತಕ್ಷಣದಿಂದಲೇ ಜಾರಿಗೆ ಬರುವಂತೆ ಈರುಳ್ಳಿ ರಪ್ತುನ್ನು ನಿಷೇಧಿಸಿ ಕೇಂದ್ರ ಸರ್ಕಾರ ಇಂದು ಆದೇಶ ಹೊರಡಿಸಿದೆ. 

ಕೂಡಲೇ ಜಾರಿಗೆ ಬರುವಂತೆ ಎಲ್ಲಾ ರೀತಿಯ ಈರುಳ್ಳಿ ರಪ್ತುನ್ನು ನಿಷೇಧಿಸಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಆದೇಶ ಹೊರಡಿಸಿದೆ.ಈ ಬಾರಿ ಮಳೆ ಹಾಗೂ ಬೆಲೆ ಏರಿಕೆ ಪರಿಣಾಮ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರುತ್ತಿಲ್ಲ. ಹಾಗಾಗೀ ಸರ್ಕಾರ ಈ ಕ್ರಮ ಕೈಗೊಂಡಿದೆ. 

ದೇಶಾದ್ಯಂತ ಉತ್ತಮವಾಗಿ ಈರುಳ್ಳಿ ಬೆಳೆಯಲಾಗಿದೆ.ಆದರೆ, ಈ ಬಾರಿ ಅತಿವೃಷ್ಟಿಯಿಂದಾಗಿ ಶೇ, 50 ರಷ್ಟು ಈರುಳ್ಳಿ ಬೆಳೆ ನಾಶವಾಗಿದೆ. ಮಹಾರಾಷ್ಟ್ರದಲ್ಲಿ ಮಳೆಯಿಂದ ಈರುಳ್ಳಿ ಆಮದಿಗೂ ಹೊಡೆತ ಬಿದ್ದಿದ್ದು, ಈರುಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದೆ. ರಾಷ್ಟ್ರ ರಾಜಧಾನಿ ನವದೆಹಲಿ ಕೆಜಿ ಈರುಳ್ಳಿ ಬೆಲೆ  60 ರಿಂದ 80 ರೂಪಾಯಿ ಆಗಿದೆ. 

ಈ ಮಧ್ಯೆ ಹೆಚ್ಚಿನ ದರದಿಂದಾಗಿ  ಗ್ರಾಹಕರಿಗೆ ಪರಿಹಾರ ನೀಡಲು, ಕೇಂದ್ರ ಸರ್ಕಾರ ದೇಶಾದ್ಯಂತ 50,000 ಟನ್ ಈರುಳ್ಳಿಯನ್ನು ತುರ್ತು ಪರಿಸ್ಥಿತಿ ನಿರ್ವಹಣೆಗಾಗಿ ದಾಸ್ತಾನು ಆಗಿ ಇಡಲಾಗಿದೆ. 

ಈರುಳ್ಳಿ ಹೆಚ್ಚಾಗಿ ಬೆಳೆಯುವ ಮಹಾರಾಷ್ಟ್ರ, ಕರ್ನಾಟಕದಂತಹ ರಾಜ್ಯಗಳಲ್ಲಿ ಪ್ರವಾಹದ ಕಾರಣ ಈರುಳ್ಳಿ ಪೂರೈಕೆ ಮಾಡದೆ ದಾಸ್ತಾನು ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರ ಕಳೆದ ತಿಂಗಳು ಎಚ್ಚರಿಕೆ ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com