ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಕಮ್ಯುನಿಕೇಷನ್ಸ್ ಗೆ 104 ಕೋಟಿ ರೂ. ಮರು ಪಾವತಿಸಲು ಕೇಂದ್ರಕ್ಕೆ 'ಸುಪ್ರೀಂ' ಆದೇಶ

ಉದ್ಯಮಿ ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಕಮ್ಯುನಿಕೇಷನ್ ಗೆ 104 ಕೋಟಿ ರೂಪಾಯಿ ಹಣವನ್ನು ಮರು ಪಾವತಿಸಬೇಕು ಎಂದು ದೂರಸಂಪರ್ಕ ವಿವಾದಗಳ ಇತ್ಯರ್ಥ ಮತ್ತು ಮೇಲ್ಮನವಿ ನ್ಯಾಯಮಂಡಳಿ(ಟಿಡಿಎಸ್ಎಟಿ) ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ.
ಅನಿಲ್ ಅಂಬಾನಿ
ಅನಿಲ್ ಅಂಬಾನಿ

ನವದೆಹಲಿ: ಉದ್ಯಮಿ ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಕಮ್ಯುನಿಕೇಷನ್ ಗೆ 104 ಕೋಟಿ ರೂಪಾಯಿ ಹಣವನ್ನು ಮರು ಪಾವತಿಸಬೇಕು ಎಂದು ದೂರಸಂಪರ್ಕ ವಿವಾದಗಳ ಇತ್ಯರ್ಥ ಮತ್ತು ಮೇಲ್ಮನವಿ ನ್ಯಾಯಮಂಡಳಿ(ಟಿಡಿಎಸ್ಎಟಿ) ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ.


ನ್ಯಾಯಮೂರ್ತಿಗಳಾದ ಆರ್ ಎಫ್ ನಾರಿಮನ್ ಮತ್ತು ಎಸ್ ರವೀಂದ್ರ ಭಟ್ ಅವರನ್ನೊಳಗೊಂಡ ನ್ಯಾಯಪೀಠ, ಈ ಅರ್ಜಿಯಲ್ಲಿ ಯಾವುದೇ ಅರ್ಹತೆಯಿಲ್ಲ ಎಂದು ಭಾವಿಸುತ್ತೇವೆ ಎಂದು ಹೇಳಿದೆ.

ನ್ಯಾಯಮಂಡಳಿ 2018ರ ಡಿಸೆಂಬರ್ 21ರಂದು, ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿ ಸುಮಾರು 104 ಕೋಟಿ ರೂಪಾಯಿಗಳನ್ನು ರಿಲಯನ್ಸ್ ಕಮ್ಯುನಿಕೇಷನ್ ಗೆ ಹಿಂತಿರುಗಿಸಬೇಕೆಂದು ಆದೇಶ ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com