ಮತ್ತೆ ಡೀಸೆಲ್ ಬೆಲೆ ಏರಿಕೆ ಮಾಡಿದ ತೈಲ ಕಂಪನಿಗಳು

ವಾಹನ ಸವಾರರಿಗೆ ಮತ್ತೆ ಬೆಲೆ ಏರಿಕೆಯ ಶಾಕ್ ತಟ್ಟಿದ್ದು, ತೈಲ ಕಂಪನಿಗಳು ಭಾನುವಾರ ಪ್ರತಿ ಲೀಟರ್ ಡೀಸೆಲ್ ಗೆ ಮತ್ತೆ 16 ಪೈಸೆ ಏರಿಕೆ ಮಾಡಿವೆ. ಆದರೆ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ನವದೆಹಲಿ: ವಾಹನ ಸವಾರರಿಗೆ ಮತ್ತೆ ಬೆಲೆ ಏರಿಕೆಯ ಶಾಕ್ ತಟ್ಟಿದ್ದು, ತೈಲ ಕಂಪನಿಗಳು ಭಾನುವಾರ ಪ್ರತಿ ಲೀಟರ್ ಡೀಸೆಲ್ ಗೆ ಮತ್ತೆ 16 ಪೈಸೆ ಏರಿಕೆ ಮಾಡಿವೆ. ಆದರೆ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಕಳೆದ ಒಂದು ತಿಂಗಳಿಂದ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಲೆ ಇದೆ . ಈಗ ಡೀಸೆಲ್ ಬೆಲೆಯಲ್ಲಿ ಮತ್ತೆ 16 ಪೈಸೆ ಏರಿಕೆ ಮಾಡಲಾಗಿದೆ. ಇದರಿಂದಾಗಿ ಒಂದು ತಿಂಗಳ ಅವಧಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಗೆ 11.42 ರೂಪಾಯಿ ಹೆಚ್ಚಳವಾದಂತಾಗಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್ 83.02 ರೂಪಾಯಿ ಇದ್ದರೆ, ಡೀಸೆಲ್ ಬೆಲೆ 76.49 ರೂ. ಇದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ 80,98 ರೂ. ಇದ್ದರೆ ಡೀಸೆಲ್ ಬೆಲೆ 80.94 ರೂ. ಗೆ ತಲುಪಿದೆ.

ಮುಂಬೈನಲ್ಲಿ ಪೆಟ್ರೋಲ್ ಬೆಲೆ 87.19 ರೂಪಾಯಿ ಇದ್ದರೆ, ಡೀಸೆಲ್ ಬೆಲೆ 79.17 ರೂಪಾಯಿಗೆ ಏರಿಕೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com