ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಲೀಟರ್‌ಗೆ 3 ರೂ. ಹೆಚ್ಚಿಸಿದ ಕೇಂದ್ರ ಸರ್ಕಾರ

ಕೋವಿಡ್ -19 ಮಹಾಮಾರಿ ಅಂತರಾಷ್ಟ್ರೀಯ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲ ಮಾಡುತ್ತಿರುವ ನಡುವೆಯೇ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಶನಿವಾರ ಪ್ರಕಟಿಸಿದೆ. 
ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಲೀಟರ್‌ಗೆ 3 ರೂ. ಹೆಚ್ಚಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕೋವಿಡ್ -19 ಮಹಾಮಾರಿ ಅಂತರಾಷ್ಟ್ರೀಯ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲ ಮಾಡುತ್ತಿರುವ ನಡುವೆಯೇ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಶನಿವಾರ ಪ್ರಕಟಿಸಿದೆ. 

ಪ್ರತಿ ಲೀಟರ್‌ಗೆ 3 ರೂ. ಅಬಕಾರಿ ಸುಂಕ ಹೆಚ್ಚಿಸಲಾಗಿದೆ ತಿಳಿಸಿದೆ. ಅದೇ ರೀತಿ ಪೆಟ್ರೋಲ್ ಮೇಲೆ ಪ್ರತ್ಯೇಕವಾಗಿ ಅಬಕಾರಿ ಸುಂಕ ವನ್ನು 2 ರೂ ನಿಂದ 8 ರೂ ಮತ್ತು ಡೀಸೆಲ್ ಮೇಲೆ 4 ರೂ.ಗೆ ಹೆಚ್ಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ರಸ್ತೆ ಸೆಸ್ ಕೂಡ ಹೆಚ್ಚಿಸಲಾಗಿದ್ದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ 1ರೂ ಹಾಗೂ ರೂ. 10 ಹೆಚ್ಚಿಸಲಾಗಿದೆ.
ಅಂತರರಾಷ್ಟ್ರೀಯ ತೈಲ ಬೆಲೆಗಳ ಇಳಿಮುಖ ಕಂಡ ಬೆನ್ನಲ್ಲೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. 

ದೇಶದ ಆರ್ಥಿಕತೆ ಮಂದಗತಿಯಿಂದ ಹೆಣಗಾಡುತ್ತಿರುವ ನಡುವೆಯೇ ಕೊರೋನಾ ವೈರಸ್ ಪ್ರಭಾವದಿಂದ ಮತ್ತಷ್ಟು ಹದಗೆಡುವ ಸಾಧ್ಯತೆಯ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸುವುದರೊಂದಿಗೆ, ಇಂಧನ ಬೆಲೆಗಳು ಸ್ವಲ್ಪಮಟ್ಟಿಗೆ ಏರಿಕೆಯಾಗುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದ 2000 ಕೋಟಿ ಹೆಚ್ಚುವರಿ ಆದಾಯ ಬರಬಹುದು ಎಂದು ವಿಶ್ಲೇಷಕರು ಅಂದಾಜಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com