2019-20ರಲ್ಲಿ 2 ಸಾವಿರ ರೂಪಾಯಿ ನೋಟ್ ಮುದ್ರಿಸಿಲ್ಲ: ಆರ್ ಬಿಐ ವಾರ್ಷಿಕ ವರದಿ

2019-20ರಲ್ಲಿ 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಮುದ್ರಿಸಲಾಗಿಲ್ಲ ಮತ್ತು ಈ ವರ್ಷ 2000 ನೋಟುಗಳ ಚಲಾವಣೆ ಕಡಿಮೆಯಾಗಿದೆ ಎಂದು ಆರ್‌ಬಿಐನ ವಾರ್ಷಿಕ ವರದಿಯಲ್ಲಿ ತಿಳಿಸಲಾಗಿದೆ.
2000 ರೂಪಾಯಿ ನೋಟು
2000 ರೂಪಾಯಿ ನೋಟು

ಮುಂಬೈ: 2019-20ರಲ್ಲಿ 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಮುದ್ರಿಸಲಾಗಿಲ್ಲ ಮತ್ತು ಈ ವರ್ಷ 2000 ನೋಟುಗಳ ಚಲಾವಣೆ ಕಡಿಮೆಯಾಗಿದೆ ಎಂದು ಆರ್‌ಬಿಐನ ವಾರ್ಷಿಕ ವರದಿಯಲ್ಲಿ ತಿಳಿಸಲಾಗಿದೆ.

ಚಲಾವಣೆಯಲ್ಲಿರುವ 2 ಸಾವಿರ ರೂ. ಕರೆನ್ಸಿ ನೋಟುಗಳ ಸಂಖ್ಯೆ 2018 ರ ಮಾರ್ಚ್ ಅಂತ್ಯದ ವೇಳೆಗೆ 33,632 ಲಕ್ಷ ಇತ್ತು. ಅದು 2019 ರ ಮಾರ್ಚ್ ಅಂತ್ಯದ ವೇಳೆಗೆ 32,910 ಲಕ್ಷ ನೋಟ್ ಗಳಿಗೆ ಇಳಿಕೆಯಾಗಿದೆ ಮತ್ತು 2020ರ ಮಾರ್ಚ್ ಅಂತ್ಯದ ವೇಳೆಗೆ 27,398 ಲಕ್ಷ ನೋಟ್ ಗಳಿಗೆ ಇಳಿದಿದೆ ಎಂದು ಆರ್‌ಬಿಐ ವಾರ್ಷಿಕ ವರದಿ ವಿವರಿಸಿದೆ.

2020ರ ಮಾರ್ಚ್ ಅಂತ್ಯದ ವೇಳೆಗೆ ಒಟ್ಟು ನೋಟುಗಳ ಪ್ರಮಾಣ ಶೇಕಡಾ 2.4, 2019 ರ ಮಾರ್ಚ್ ಅಂತ್ಯದ ವೇಳೆಗೆ ಶೇ. 3 ಮತ್ತು 2018 ರ ಮಾರ್ಚ್ ಅಂತ್ಯದ ವೇಳೆಗೆ 3.3 ರಷ್ಟಿದೆ.

ಮತ್ತೊಂದೆಡೆ, 2018 ರಿಂದ ಚಲಾವಣೆಗೆ ಬಂದ 500 ಹಾಗೂ 200 ರೂಪಾಯಿ ನೋಟ್ ಗಳ ಪ್ರಮಾಣ ಮತ್ತು ಚಲಾವಣೆ ಕಳೆದ ಮೂರು ವರ್ಷಗಳಲ್ಲಿ ಗಣನೀಯವಾಗಿ ಏರಿದೆ ಎಂದು ವರದಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com