ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಶೇ.23.9ರಷ್ಟು ಕುಸಿತ
ಕರೋನಾವೈರಸ್ ಸೋಂಕು ಎದುರಿಸಲು ಜಾರಿಗೊಳಿಸಲಾದ ಲಾಕ್‌ಡೌನ್ ಹಿನ್ನೆಲೆಯಲ್ಲಿ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್ ನಿಂದ ಜೂನ್ ವರೆಗೆ) ಭಾರತದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ಬೆಳವಣಿಗೆ ದರ ಶೇ ಮೈನಸ್ 23.9 ಕ್ಕೆ ಕುಸಿದಿದೆ.
Published: 31st August 2020 07:52 PM | Last Updated: 31st August 2020 07:52 PM | A+A A-

ಜಿಡಿಪಿ
ನವದೆಹಲಿ: ಕರೋನಾವೈರಸ್ ಸೋಂಕು ಎದುರಿಸಲು ಜಾರಿಗೊಳಿಸಲಾದ ಲಾಕ್‌ಡೌನ್ ಹಿನ್ನೆಲೆಯಲ್ಲಿ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್ ನಿಂದ ಜೂನ್ ವರೆಗೆ) ಭಾರತದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ಬೆಳವಣಿಗೆ ದರ ಶೇ ಮೈನಸ್ 23.9 ಕ್ಕೆ ಕುಸಿದಿದೆ.
2020-21ರ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ 26.90 ಲಕ್ಷ ಕೋಟಿ ರೂ ಎಂದು ಅಂದಾಜಿಸಲಾಗಿದೆ. ಇದು 2019-20ರ ಮೊದಲ ತ್ರೈಮಾಸಿಕದಲ್ಲಿನ 35.35 ಲಕ್ಷ ಕೋಟಿ ರೂ.ಗೆ ಹೋಲಿಸಿದರೆ ಶೇ 23.9ರಷ್ಟು ಕುಸಿತವಾಗಿದೆ. 2019-20ರ ಮೊದಲ ತ್ರೈಮಾಸಿಕದಲ್ಲಿ ಶೇ 5.2ರಷ್ಟು ಬೆಳವಣಿಗೆ ದಾಖಲಿಸಲಾಗಿತ್ತು ಎಂದು ಸರ್ಕಾರ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ತಿಳಿಸಿದೆ.
2020-21ರ ಮೊದಲ ತ್ರೈಮಾಸಿಕದ ಒಟ್ಟು ಮೌಲ್ಯ ಸೇರ್ಪಡೆ (ಜಿವಿಎ) 25.53 ಲಕ್ಷ ಕೋಟಿ ರೂ ಎಂದು ಅಂದಾಜಿಸಲಾಗಿದ್ದು, 2019-20ರ ಮೊದಲ ತ್ರೈಮಾಸಿಕದ 33.08 ಲಕ್ಷ ಕೋಟಿ ರೂ.ಗೆ ಹೋಲಿಸಿದರೆ ಶೇ 22.8 ರಷ್ಟು ಕುಸಿತ ಕಂಡುಬಂದಿದೆ ಎಂದು ರಾಷ್ಟ್ರೀಯ ಅಂಕಿಅಂಶ ಕಚೇರಿ (ಎನ್‌ಎಸ್‌ಒ) ಇಲ್ಲಿ ತಿಳಿಸಿದೆ.
2020-21ರ ಮೊದಲ ತ್ರೈಮಾಸಿಕದಲ್ಲಿ ಪ್ರಸ್ತುತ ಬೆಲೆಗಳಲ್ಲಿ ಜಿಡಿಪಿ 38.08 ಲಕ್ಷ ಕೋಟಿ ರೂ ಎಂದು ಅಂದಾಜಿಸಲಾಗಿದೆ. ಇದು 2019-20ರ ಮೊದಲ ತ್ರೈಮಾಸಿಕದಲ್ಲಿ 49.18 ಲಕ್ಷ ಕೋಟಿ ರೂ.ಗಳಷ್ಟಿತ್ತು. ಅಂದರೆ, 2019-20ರ ಮೊದಲ ತ್ರೈಮಾಸಿಕಕ್ಕೆ ಶೇ 22.6 ರಷ್ಟು ಕುಸಿತ ಕಂಡು ಬಂದಿದೆ. 2019-20ರ ಮೊದಲ ತ್ರೈಮಾಸಿಕದಲ್ಲಿ ಶೇ 8.1ರಷ್ಟು ಬೆಳವಣಿಗೆ ಸಾಧಿಸಲಾಗಿತ್ತು.