ವ್ಯಾಪಾರ-ವಹಿವಾಟು ಅಲ್ಪ ಚೇತರಿಕೆ: ನವೆಂಬರ್ ನಲ್ಲಿ 1.04 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ

ಕೊರೋನಾ ಸೋಂಕಿನ ಭೀತಿಯ ನಂತರ ಆನ್ ಲಾಕ್ ಮಾರ್ಗಸೂಚಿಯಂತೆ ದೇಶದಲ್ಲಿ ವ್ಯಾಪಾರ ವಹಿವಾಟು ಕೊಂಚ ಚೇತರಿಸಿಕೊಂಡಿದೆ.

Published: 01st December 2020 04:40 PM  |   Last Updated: 01st December 2020 04:55 PM   |  A+A-


Karnataka gets Rs 1,400 crore in IGST dues

ಸಾಂದರ್ಭಿಕ ಚಿತ್ರ

Posted By : Lingaraj Badiger
Source : UNI

ನವದೆಹಲಿ: ಕೊರೋನಾ ಸೋಂಕಿನ ಭೀತಿಯ ನಂತರ ಆನ್ ಲಾಕ್ ಮಾರ್ಗಸೂಚಿಯಂತೆ ದೇಶದಲ್ಲಿ ವ್ಯಾಪಾರ ವಹಿವಾಟು ಕೊಂಚ ಚೇತರಿಸಿಕೊಂಡಿದೆ. ಇದರಿಂದಾಗಿ ನವೆಂಬರ್ ಒಂದೇ ತಿಂಗಳಿನಲ್ಲಿ 1,04,963 ಕೋಟಿ ರೂ. ಜಿಎಸ್ ಟಿ ತೆರಿಗೆ ಸಂಗ್ರಹವಾಗಿರುವುದಾಗಿದ್ದು, ಇದು ಕಳೆದ ವರ್ಷಕ್ಕಿಂತ ಶೇಕಡ 1.42 ರಷ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಪ್ರಸಕ್ತ ವರ್ಷದ ನವೆಂಬರ್ ತಿಂಗಳಲ್ಲಿ ಒಟ್ಟಾರೆಯಾಗಿ 1,04,963 ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹವಾಗಿದೆ.

ಇದರಲ್ಲಿ ಕೇಂದ್ರ ಜಿಎಸ್‌ಟಿ 19,189 ಕೋಟಿ ರೂ., ರಾಜ್ಯ ಜಿಎಸ್‌ಟಿ 25,540 ಕೋಟಿ ರೂ., ಐಜಿಎಸ್‌ಟಿ 51,992 ಕೋಟಿ (ಸರಕುಗಳ ಆಮದಿನಿಂದ ಸಂಗ್ರಹಿಸಿದ 22,078 ಕೋಟಿ ರೂ.ಸೇರಿದಂತೆ) ಮತ್ತು ಸೆಸ್, 8,242 ಕೋಟಿ (ಸರಕುಗಳ ಆಮದಿನ ಮೇಲೆ ಸಂಗ್ರಹಿಸಿದ 9 809 ಕೋಟಿ ಸೇರಿದಂತೆ) ಗಳಾಗಿದೆ. 2020 ರ ನವೆಂಬರ್ 30 ರವರೆಗೆ ನವೆಂಬರ್ ತಿಂಗಳಿಗೆ ಸಲ್ಲಿಸಲಾದ ಒಟ್ಟು ಜಿಎಸ್‌ಟಿಆರ್ -3 ಬಿ ರಿಟರ್ನ್ಸ್ ಸಂಖ್ಯೆ 82 ಲಕ್ಷವಾಗಿದೆ.

ಕೇಂದ್ರ ಜಿಎಸ್‌ಟಿಗೆ 22,293 ಕೋಟಿ ರೂ. ಮತ್ತು ರಾಜ್ಯ ಜಿಎಸ್‌ಟಿಗೆ 16,286 ಕೋಟಿ ರೂ.ಗಳನ್ನು ಐಜಿಎಸ್‌ಟಿಯಿಂದ ನಿಯಮಿತ ಇತ್ಯರ್ಥವಾಗಿ ಸರ್ಕಾರ ಇತ್ಯರ್ಥಪಡಿಸಿದೆ. 2020 ರ ನವೆಂಬರ್ ತಿಂಗಳಲ್ಲಿ ನಿಯಮಿತ ಇತ್ಯರ್ಥದ ನಂತರ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಗಳಿಸಿದ ಒಟ್ಟು ಆದಾಯ ಕೇಂದ್ರ ಜಿಎಸ್‌ಟಿಗೆ 41,482 ಕೋಟಿ ಕೋಟಿ ರೂ. ಮತ್ತು ರಾಜ್ಯ ಜಿಎಸ್‌ಟಿಗೆ 41,826 ಕೋಟಿ ರೂ. ಗಳಾಗಿದೆ.

ಜಿಎಸ್‌ಟಿ ಆದಾಯದಲ್ಲಿನ ಇತ್ತೀಚಿನ ಚೇತರಿಕೆಯ ಪ್ರವೃತ್ತಿಗೆ ಅನುಗುಣವಾಗಿ, 2020 ರ ನವೆಂಬರ್ ತಿಂಗಳ ಆದಾಯವು ಕಳೆದ ವರ್ಷದ ಇದೇ ತಿಂಗಳಲ್ಲಿ ಜಿಎಸ್‌ಟಿ ಆದಾಯಕ್ಕಿಂತ ಶೇ.1.4 ರಷ್ಟು ಹೆಚ್ಚಾಗಿದೆ. ಕಳೆದ ವರ್ಷದ ಇದೇ ತಿಂಗಳಲ್ಲಿ ಬಂದ ಆದಾಯಕ್ಕೆ ಹೋಲಿಸಿದರೆ ಈ ತಿಂಗಳಲ್ಲಿ, ಸರಕುಗಳ ಆಮದಿನಿಂದ ಬರುವ ಆದಾಯವು ಶೇ. 4.9 ರಷ್ಟು ಹೆಚ್ಚಾಗಿದೆ ಮತ್ತು ದೇಶೀಯ ವಹಿವಾಟಿನಿಂದ (ಸೇವೆಗಳ ಆಮದು ಸೇರಿದಂತೆ) ಆದಾಯವು ಶೇ. 0.5 ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ಹಣಕಾಸು ಇಲಾಖೆ ತಿಳಿಸಿದೆ.

Stay up to date on all the latest ವಾಣಿಜ್ಯ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp