4ನೇ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ಸಕಾರಾತ್ಮಕವಾಗಿರಲಿದೆ: ನೀತಿ ಆಯೋಗದ ಉಪಾಧ್ಯಕ್ಷ

ಕೊರೋನಾ ಲಾಕ್ ಡೌನ್ ನಂತರ ಭಾರತದ ಆರ್ಥಿಕತೆ ಚೇತರಿಸಿಕೊಳ್ಳುತ್ತಿದ್ದು, ಜಿಡಿಪಿ ಬೆಳವಣಿಗೆ ಈ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಸಕಾರಾತ್ಮಕವಾಗಿರಲಿದೆ ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಅವರು ಬುಧವಾರ ಹೇಳಿದ್ದಾರೆ.

Published: 02nd December 2020 04:50 PM  |   Last Updated: 02nd December 2020 05:53 PM   |  A+A-


Election Commission finds NITI Aayog's Rajiv Kumar guilty of violating poll code

ರಾಜೀವ್ ಕುಮಾರ್

Posted By : Lingaraj Badiger
Source : PTI

ನವದೆಹಲಿ: ಕೊರೋನಾ ಲಾಕ್ ಡೌನ್ ನಂತರ ಭಾರತದ ಆರ್ಥಿಕತೆ ಚೇತರಿಸಿಕೊಳ್ಳುತ್ತಿದ್ದು, ಜಿಡಿಪಿ ಬೆಳವಣಿಗೆ ಈ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಸಕಾರಾತ್ಮಕವಾಗಿರಲಿದೆ ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಅವರು ಬುಧವಾರ ಹೇಳಿದ್ದಾರೆ.

ಕೇಂದ್ರದ ಹೊಸ ಕೃಷಿ ಸುಧಾರಣಾ ಕಾನೂನುಗಳು ರೈತರ ಆದಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿವೆ. ಆದರೆ ತಪ್ಪು ತಿಳುವಳಿಕೆ ಮತ್ತು ತಪ್ಪು ಸಂವಹನದ ಪರಿಣಾಮ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ರಾಜೀವ್ ಕುಮಾರ್ ಅವರು ತಿಳಿಸಿದ್ದಾರೆ.

ಎರಡನೇ ತ್ರೈಮಾಸಿಕದ ಜಿಡಿಪಿ ಅಂಕಿ(ಶೇಕಡಾ 7.5 ರಷ್ಟು ಬೆಳವಣಿಗೆ) ಅಂಶವನ್ನು ಗಮನಿಸಿದರೆ ಈ ಸಾಂಕ್ರಾಮಿಕ-ಪ್ರೇರಿತ ಆರ್ಥಿಕ ಸಂಕಷ್ಟದಿಂದ ದೇಶ ಹೊರಬರುತ್ತಿದೆ ಎಂಬುದನ್ನು ತೋರಿಸುತ್ತದೆ. ಮೂರನೇ ತ್ರೈಮಾಸಿಕದಲ್ಲಿ ನಾವು ವರ್ಷದ ಹಿಂದಿನ ಆರ್ಥಿಕ ಚಟುವಟಿಕೆಯನ್ನು ಸಾಧಿಸುತ್ತೇವೆ ಎಂಬುದು ತಮ್ಮ ನಿರೀಕ್ಷೆ ಎಂದಿದ್ದಾರೆ.

ಕೋವಿಡ್ ಸಾಂಕ್ರಾಮಿಕವು ಆರ್ಥಿಕ ಚಟುವಟಿಕೆಗಳ ಮೇಲೆ ಅಭೂತಪೂರ್ವ ಪರಿಣಾಮ ಬೀರಿದೆ. ಆದರೆ ಇದು ಸಂಪೂರ್ಣವಾಗಿ ನೈಸರ್ಗಿಕ ವಿಪತ್ತಿನ ಸ್ವರೂಪದಲ್ಲಿದೆ ಮತ್ತು ಸಾಮಾನ್ಯ ಆರ್ಥಿಕ ಚಕ್ರಕ್ಕೆ ಸಂಬಂಧಿಸಿದ್ದಲ್ಲ ಎಂದು ರಾಜೀವ್ ಕುಮಾರ್ ಹೇಳಿದ್ದಾರೆ.

Stay up to date on all the latest ವಾಣಿಜ್ಯ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp