ಷೇರುಮಾರುಕಟ್ಟೆ ಕುಸಿತದ ಎಫೆಕ್ಟ್: ರೂಪಾಯಿ ಮೌಲ್ಯ ಕುಸಿತ

ಕೊರೋನಾ ವೈರಸ್ ಪರಿಣಾಮ ಭಾರತೀಯ ಷೇರುಮಾರುಕಟ್ಟೆ ಕುಸಿದ ಬೆನ್ನಲ್ಲೇ ರೂಪಾಯಿ ಮೌಲ್ಯ ಕುಸಿತಕಂಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮುಂಬೈ: ಕೊರೋನಾ ವೈರಸ್ ಪರಿಣಾಮ ಭಾರತೀಯ ಷೇರುಮಾರುಕಟ್ಟೆ ಕುಸಿದ ಬೆನ್ನಲ್ಲೇ ರೂಪಾಯಿ ಮೌಲ್ಯ ಕುಸಿತಕಂಡಿದೆ.

ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ ಇಂದು 33 ಪೈಸೆಯಷ್ಟು ಕುಸಿತ ಕಂಡಿದೆ. ಆ ಮೂಲಕ 71.61 ರೂಗಳಲ್ಲಿ ವಹಿವಾಟು ನಡೆಸುತ್ತಿದೆ.  ಇನ್ನು ಇಂದು ಮಾರುಕಟ್ಟೆ ಆರಂಭದಲ್ಲೇ ಸೆನ್ಸೆಕ್ಸ್ 1,083.85 ಅಂಕಗಳ ಕುಸಿತಗೊಂಡು, 38,661.81ಕ್ಕೆ ಇಳಿದಿದೆ. 

ಚೀನಾ ಸೇರಿದಂತೆ ವಿಶ್ವದ ನಾನಾ ದೇಶಗಳಲ್ಲಿ ಮರಣ ಭೀತಿ ಸೃಷ್ಟಿಸಿರುವ ಕೊರೋನಾ ವೈರಸ್ ಎಫೆಕ್ಟ್ ಭಾರತೀಯ ಷೇರುಮಾರುಕಟ್ಟೆ ಮೇಲೂ ಆಗಿದ್ದು, ಕೇವಲ 5 ನಿಮಿಷಗಳ ಅಂತರದಲ್ಲಿ ಹೂಡಿಕೆದಾರರು 5 ಲಕ್ಷ ಕೋಟಿ ರೂ ನಷ್ಟ ಅನುಭವಿಸಿದ್ದಾರೆ. 

ಇಂದಿನ ವಹಿವಾಟಿನಲ್ಲಿ ಟಾಟಾ ಸ್ಟೀಲ್, ಟೆಕ್ ಮಹೀಂದ್ರಾ, ಇನ್ಫೋಸಿಸ್, ಮಹೀಂದ್ರಾ ಮತ್ತು ಮಹೀಂದ್ರಾ, ಬಜಾಜ್ ಫೈನಾನ್ಸ್, ಎಚ್‌ಸಿಎಲ್ ಟೆಕ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆಗಳು ಭಾರಿ ನಷ್ಠ ಅನುಭವಿಸಿದ್ದು, ಈ ಸಂಸ್ಥೆಗಳ ಷೇರುಮೌಲ್ಯದಲ್ಲಿ ಕುಸಿತ ಕಂಡುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com