ಚಿನ್ನದ ಬೆಲೆ ದಾಖಲೆಯ ಏರಿಕೆ, ಮೊದಲ ಬಾರಿ 50 ಸಾವಿರದ ಗಡಿ ದಾಟಿದ ಹಳದಿ ಲೋಹ

ದೇಶದಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಲೇ ಇದ್ದು, ಬುಧವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 430 ರೂ. ದಾಖಲೆ ಏರಿಕೆಯಾಗುವ ಮೂಲಕ ಇದೆ ಮೊದಲ ಬಾರಿಗೆ 10. ಗ್ರಾಂ ಚಿನ್ನದ ಬೆಲೆ 50 ಸಾವಿರ ರೂ. ಗಡಿ ದಾಟಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಲೇ ಇದ್ದು, ಬುಧವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 430 ರೂ. ದಾಖಲೆ ಏರಿಕೆಯಾಗುವ ಮೂಲಕ ಇದೆ ಮೊದಲ ಬಾರಿಗೆ 10. ಗ್ರಾಂ ಚಿನ್ನದ ಬೆಲೆ 50 ಸಾವಿರ ರೂ. ಗಡಿ ದಾಟಿದೆ.

ದೆಹಲಿಯಲ್ಲಿ 10 ಗ್ರಾಂ 24 ಕ್ಯಾರೆಟ್‌ ಶುದ್ಧ ಚಿನ್ನದ ಬೆಲೆ 50,920ಕ್ಕೆ ಏರಿಕೆಯಾಗಿದ್ದರೆ, ಬೆಂಗಳೂರಿನಲ್ಲಿ 50,720 ರೂ., ಚೆನ್ನೈನಲ್ಲಿ 51,380 ರೂ. ತಲುಪಿದೆ. 10 ಗ್ರಾಂ 22 ಕ್ಯಾರೆಟ್‌ ಚಿನ್ನದ ಬೆಲೆ ಬೆಂಗಳೂರಿನಲ್ಲಿ 46,520 ರೂ.ಗೆ ಏರಿಕೆ ಆಗಿದ್ದರೆ ಚೆನ್ನೈನಲ್ಲಿ 47,100 ರೂ. ತಲುಪಿದೆ.

ಚಿನ್ನದ ಜೊತೆ ಬೆಳ್ಳಿ ಬೆಲೆಯೂ ಏರಿಕೆಯಾಗಿದ್ದು 1 ಕೆಜಿ ಬೆಳ್ಳಿ ದರ 60,400 ರೂ. ಗೆ ಏರಿಕೆಯಾಗಿದೆ. ಕಳೆದ ಮೂರು ದಿನಗಳಲ್ಲಿ ಬೆಳ್ಳಿ ದರ 8,500 ರೂ. ಏರಿಕೆ ಕಂಡಿದೆ. 7 ವರ್ಷದ ಬಳಿಕ ಭಾರತದಲ್ಲಿ ಬೆಳ್ಳಿ ದರ ಭಾರೀ ಏರಿಕೆ ಕಂಡಿದೆ.

ಬುಧವಾರ ಜಾಗತಿಕ ಮಾರುಕಟ್ಟೆಯಲ್ಲಿ 1 ಔನ್ಸ್‌( 28.3 ಗ್ರಾಂ) ಚಿನ್ನದ ಬೆಲೆ ಶೇ.1.3 ರಷ್ಟು ಏರಿಕೆಯಾಗಿ 1,865.81 ಡಾಲರ್‌(1.39 ಲಕ್ಷ ರೂ.) ತಲುಪಿದೆ. 1 ಔನ್ಸ್‌ ಬೆಳ್ಳಿಯ ಬೆಲೆ ಶೇ.7.2 ರಷ್ಟು 22.8366 ಡಾಲರ್‌(1,700 ರೂ. )ಏರಿಕೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com