ಚಿನ್ನದ ಬೆಲೆ ಮತ್ತೆ 475 ರೂ. ಏರಿಕೆ, 10 ಗ್ರಾಂ ಹಳದಿ ಲೋಹಕ್ಕೆ 51,946 ರೂಪಾಯಿ

ದೇಶದಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಲೇ ಇದ್ದು, ಶುಕ್ರವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 475 ರೂ. ದಾಖಲೆಯ ಏರಿಕೆಯಾಗುವ ಮೂಲಕ 10. ಗ್ರಾಂ ಚಿನ್ನದ ಬೆಲೆ 51,946 ರೂಪಾಯಿಗೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಲೇ ಇದ್ದು, ಶುಕ್ರವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 475 ರೂ. ದಾಖಲೆಯ ಏರಿಕೆಯಾಗುವ ಮೂಲಕ 10. ಗ್ರಾಂ ಚಿನ್ನದ ಬೆಲೆ 51,946 ರೂಪಾಯಿಗೆ ಏರಿಕೆಯಾಗಿದೆ.

ದೆಹಲಿಯಲ್ಲಿ 10 ಗ್ರಾಂ 24 ಕ್ಯಾರೆಟ್‌ ಶುದ್ಧ ಚಿನ್ನದ ಬೆಲೆ 51,946ಕ್ಕೆ ಏರಿಕೆಯಾಗಿದೆ. ಅಂತರರಾಷ್ಟ್ರೀಯ ಚಿನ್ನದ ಬೆಲೆಗಳು ಏರಿಕೆಯಾಗಿದ್ದು, ರೂಪಾಯಿ ಮೌಲ್ಯ ಮತ್ತೆ ಕುಸಿತಗೊಂಡಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಹಿರಿಯ ವಿಶ್ಲೇಷಕ ತಪನ್ ಪಟೇಲ್ ಹೇಳಿದ್ದಾರೆ.

ರೂಪಾಯಿ ಮೌಲ್ಯ ಅಮೆರಿಕದ ಡಾಲರ್ ವಿರುದ್ಧ 8 ಪೈಸೆ ಕುಸಿದಿದ್ದು, ಪ್ರತಿ ಡಾಲರ್ 74.83 ರೂಪಾಯಿಗೆ ಏರಿಕೆಯಾಗಿದೆ.

ಅಮೆರಿಕ–ಚೀನಾ ಬಿಕ್ಕಟ್ಟು ತೀವ್ರವಾಗುತ್ತಿರುವುದು ಮತ್ತು ಅಮೆರಿಕದಲ್ಲಿ ಕೋವಿಡ್–19‌ ಪ್ರಕರಣಗಳ ಸಂಖ್ಯೆ ಏರಿಕೆ ಕಾಣುತ್ತಿರುವುದರಿಂದ ಚಿನ್ನದ ದರ ಏರುಮುಖವಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com