ಸತತ 11ನೇ ದಿನವೂ ಏರಿದ ಇಂಧನ ಬೆಲೆ: ಪರಿಹಾರ ನೀಡುವಂತೆ ಗ್ರಾಹಕರ ಆಗ್ರಹ

ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಸತತ 11ನೇ ದಿನವೂ ಏರಿಕೆ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪರಿಹಾರ ನೀಡುವಂತೆ ಗ್ರಾಹಕರು ಆಗ್ರಹಿಸಲು ಆರಂಭಿಸಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಸತತ 11ನೇ ದಿನವೂ ಏರಿಕೆ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪರಿಹಾರ ನೀಡುವಂತೆ ಗ್ರಾಹಕರು ಆಗ್ರಹಿಸಲು ಆರಂಭಿಸಿದ್ದಾರೆ. 

ಪೆಟ್ರೋಲ್ ದರ ಬುಧವಾರ ಲೀಟರ್'ಗೆ 55 ಪೈಸೆ ಹಾಗೂ ಡೀಸೆಲ್ ದರ ಪ್ರತೀ ಲೀಟರ್'ಗೆ 69 ಪೈಸೆ ಏರಿಕೆಯಾಗಿದೆ. ಹೀಗಾಗಿ ಪೆಟ್ರೋಲ್ ಕಳೆದ 11 ದಿನದಲ್ಲಿ ರೂ.6.2 ಹಾಗೂ ಡೀಸೆಲ್ ದರ ರೂ.6.49 ಏರಿಕೆಯಾಗಿದೆ.
 
ಪ್ರಸ್ತುತ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ರೂ.77.28ಕ್ಕೆ ಏರಿಕೆಯಾಗಿದ್ದರೆ, ಪ್ರತೀ ಲೀಟರ್ ಡೀಸೆಲ್ ದರ ರೂ.75.79ಕ್ಕೆ ತಲುಪಿದೆ. 

ಸತತ 11 ದಿನಗಳಿಂದಲೂ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಹಕರು ಇದೀಗ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸುತ್ತಿದ್ದಾರೆ. 

ರೂ.1 ಏರಿಕೆಯಾದರೂ ಕೂಡ ನಮಗದೂ ಹೊರೆಯೇ. ಸರ್ಕಾರ ಈ ರೀತಿ ಬೆಲೆ ಏರಿಕೆ ಮಾಡಬಾರದು. ಕೂಡಲೇ ಈ ಬೆಲೆ ಏರಿಕೆಯನ್ನು ಕೇಂದ್ರ ಸರ್ಕಾರ ನಿಲ್ಲಿಸಬೇಕೆಂದು ಗ್ರಾಹಕರೊಬ್ಬರು ಹೇಳಿದ್ದಾರೆ. 

ಕೊರೋನಾ ಹಿನ್ನೆಲೆಯಲ್ಲಿ ಇಡೀ ದೇಶವೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಈಗಷ್ಟೇ ಚೇತರಿಸಿಕೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿ ಬೆಲೆ ಏರಿಕೆ ಸರಿಯಲ್ಲ. ಕೂಡಲೇ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಮತ್ತೊಬ್ಬ ಗ್ರಾಹಕರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com