ಸತತ 21ನೇ ದಿನವೂ ಏರಿಕೆ ಕಂಡ ತೈಲ ಬೆಲೆ: ಇಂದಿನ ಪೆಟ್ರೋಲ್‌, ಡೀಸೆಲ್‌ ದರ ಇಂತಿದೆ...

ಸತತ 21ನೇ ದಿನವೂ ತೈಲ ಬೆಲೆ ಏರಿಕೆ ಕಂಡಿದ್ದು, ಪ್ರತೀ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 0.25 ಪೈಸೆ ಹಾಗೂ ಪ್ರತೀ ಲೀಟರ್ ಡೀಸೆಲ್ ದರದಲ್ಲಿ 0.21 ಪೈಸೆಯಷ್ಟು ಏರಿಕೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಸತತ 21ನೇ ದಿನವೂ ತೈಲ ಬೆಲೆ ಏರಿಕೆ ಕಂಡಿದ್ದು, ಪ್ರತೀ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 0.25 ಪೈಸೆ ಹಾಗೂ ಪ್ರತೀ ಲೀಟರ್ ಡೀಸೆಲ್ ದರದಲ್ಲಿ 0.21 ಪೈಸೆಯಷ್ಟು ಏರಿಕೆಯಾಗಿದೆ.

ಕಳೆದ ಮೂರು ವಾರಗಳಲ್ಲಿ ಡೀಸೆಲ್ ಪ್ರತೀ ಲೀಟರ್ ಮೇಲೆ ರೂ.11.03, ಪೆಟ್ರೋಲ್ ಪ್ರತಿ ಲೀಟರ್ ಮೇಲೆ ರೂ.9.12 ಹೆಚ್ಚಳವಾದಂತಾಗಿದೆ. 

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ ರೂ.80.38ಕ್ಕೆ ತಲುಪಿದ್ದು, ಡೀಸೆಲ್ ಲೀಟರ್'ಗೆ 80.40ಕ್ಕೆ ತಲುಪಿದೆ. 

ಇನ್ನು ಶನಿವಾರ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ಬೆಲೆ ರೂ.85.84 ಹಾಗೂ ಡೀಸೆಲ್ ಬೆಲೆ ರೂ.82.99ಕ್ಕೆ ಮುಟ್ಟಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com