ಆತಂಕ ಬೇಡ, ಯೆಸ್ ಬ್ಯಾಂಕ್ ಬಿಕ್ಕಟ್ಟು ಶೀಘ್ರ ಶಮನ, ನಿಮ್ಮ ಹಣ ಸುರಕ್ಷಿತ: ನಿರ್ಮಲಾ ಸೀತಾರಾಮನ್ ಅಭಯ

ಯೆಸ್ ಬ್ಯಾಂಕ್ ಖಾತೆದಾರರ ಹಣ ಸುರಕ್ಷಿತವಾಗಿದ್ದು, ಖಾತೆದಾರರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ. ಬಿಕ್ಕಟ್ಟು ಶೀಘ್ರದಲ್ಲೇ ಬಗೆ ಹರಿಯುವ ವಿಶ್ವಾಸವಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಯೆಸ್ ಬ್ಯಾಂಕ್ ಖಾತೆದಾರರ ಹಣ ಸುರಕ್ಷಿತವಾಗಿದ್ದು, ಖಾತೆದಾರರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ. ಬಿಕ್ಕಟ್ಟು ಶೀಘ್ರದಲ್ಲೇ ಬಗೆ ಹರಿಯುವ ವಿಶ್ವಾಸವಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ತೀವ್ರ ಆರ್ಥಿಕ ಬಿಕ್ಕಟ್ಟು ಮತ್ತು ಪಾರದರ್ಶಕ ಕಾರ್ಯನಿರ್ವಹಣೆಯಲ್ಲಿನ ಲೋಪದೋಷಗಳ ಹಿನ್ನಲೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಯೆಸ್ ಬ್ಯಾಂಕ್ ನ ಆಡಳಿತ ಮಂಡಳಿಯನ್ನು ಅಮಾನತು ಮಾಡಿ ಬ್ಯಾಂಕ್ ಅನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿತ್ತು. ಅಲ್ಲದೆ ಯೆಸ್ ಬ್ಯಾಂಕ್ ಖಾತೆದಾರರು 50 ಸಾವಿರಕ್ಕಿಂತ ಹೆಚ್ಚಿನ ಹಣವನ್ನು ವಿತ್ ಡ್ರಾ ಮಾಡುವ ಹಾಗಿಲ್ಲ ಎಂದು ಮಿತಿ ಹೇರಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಯೆಸ್ ಬ್ಯಾಂಕ್ ಗ್ರಾಹಕರಲ್ಲಿ ಆತಂಕ ಶುರುವಾಗಿದ್ದು, ಇದೇ ಕಾರಣಕ್ಕೆ ಯೆಸ್ ಬ್ಯಾಂಕ್ ಎಟಿಎಂಗಳಲ್ಲಿ ಖಾತೆದಾರರು ಏಕಾಏಕಿ ಹಣ ವಿತ್ ಡ್ರಾ ಮಾಡಲು ಮುಂದಾಗಿದ್ದಾರೆ.

ಇದೀಗ ಈ ವಿಚಾರಕ್ಕೆ ಸಂಬಂಧಿಸದಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರತಿಕ್ರಿಯೆ ನೀಡಿದ್ದು, ಯೆಎಸ್ ಬ್ಯಾಂಕ್ ಬಿಕ್ಕಟ್ಟಿನ ಕುರಿತು ತಾವು ಆರ್ ಬಿಐ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇನೆ. ಯೆಸ್ ಬ್ಯಾಂಕ್ ಬಿಕ್ಕಟ್ಟು ಶಮನಕ್ಕೆ ಆರ್ ಬಿಐ ಎಲ್ಲ ರೀತಿಯ ಕ್ರಮ ಕೈಗೊಂಡಿದೆ. ಶೀಘ್ರವೇ ಬಿಕ್ಕಟ್ಟು ಬಗೆಹರಿಯುವ ವಿಶ್ವಾಸವಿದ್ದು, ಯಾವುದೇ ಖಾತೆದಾರರನ ಹಣ ನಷ್ಟವಾಗುವುದಿಲ್ಲ. ಎಲ್ಲ ಖಾತೆದಾರರ ಹಣ ಸಂಪೂರ್ಣ ಸುರಕ್ಷಿತವಾಗಿದೆ. ಖಾತೆದಾರರ ಸುರಕ್ಷತಾ ದೃಷ್ಟಿಯಿಂದಲೇ ಯೆಸ್ ಬ್ಯಾಂಕ್ ಅನ್ನು ಆರ್ ಬಿಐ ತನ್ನ ಸುಪರ್ದಿಗೆ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.

ಇನ್ನು ಆರ್ ಬಿಐ ಯೆಸ್ ಬ್ಯಾಂಕ್ ನ ಆಡಳಿತ ಮಂಡಳಿಯನ್ನು ಅಮಾನತು ಮಾಡಿ, ಬ್ಯಾಂಕ್ ಅನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳುತ್ತಲೇ ಅತ್ತ ಷೇರುಮಾರುಕಟ್ಟೆಯಲ್ಲಿ ನಕಾರಾತ್ಮಕ ಬೆಳವಣಿಗೆ ಕಂಡುಬಂದಿದೆ. ಯೆಸ್ ಬ್ಯಾಂಕ್ ಷೇರುಗಳ ಮೌಲ್ಯದಲ್ಲಿ ಗಣನೀಯ ಪ್ರಮಾಣದ ಕುಸಿತ ಕಂಡುಬಂದಿದ್ದು, ಶೇ.58.97ರಷ್ಟು ಮೌಲ್ಯ ಕುಸಿತವಾಗಿದೆ. ಈ ಹಿಂದೆ 21.70 ರೂ ಸರಾಸರಿಯಲ್ಲಿ ವಹಿವಾಟು ನಡೆಸುತ್ತಿದ್ದ ಯೆಸ್ ಬ್ಯಾಂಕ್ ಷೇರುಗಳು ಇಂದು ಏಕಾಏಕಿ 15.10 ರೂ ಗೆ ಇಳಿಕೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com