#ಯೆಸ್_ಬ್ಯಾಂಕ್ ಆರ್ಥಿಕ ಬಿಕ್ಕಟ್ಟು; ಬ್ಯಾಂಕ್ ಸಂಸ್ಥಾಪಕ ರಾಣಾಕಪೂರ್ ಗೆ ಇಡಿ ತೀವ್ರ ವಿಚಾರಣೆ

ಯೆಸ್_ಬ್ಯಾಂಕ್ ಆರ್ಥಿಕ ಬಿಕ್ಕಟ್ಟು ವಿಚಾರಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಸಂಸ್ಥಾಪಕ ಹಾಗೂ ಮಾಜಿ ಸಿಇಒ ರಾಣಾಕಪೂರ್ ರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತೀವ್ರ ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಯೆಸ್_ಬ್ಯಾಂಕ್ ಸಂಸ್ಥಾಪಕ ರಾಣಾಕಪೂರ್ (ಸಂಗ್ರಹ ಚಿತ್ರ)
ಯೆಸ್_ಬ್ಯಾಂಕ್ ಸಂಸ್ಥಾಪಕ ರಾಣಾಕಪೂರ್ (ಸಂಗ್ರಹ ಚಿತ್ರ)

ನವದೆಹಲಿ: ಯೆಸ್_ಬ್ಯಾಂಕ್ ಆರ್ಥಿಕ ಬಿಕ್ಕಟ್ಟು ವಿಚಾರಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಸಂಸ್ಥಾಪಕ ಹಾಗೂ ಮಾಜಿ ಸಿಇಒ ರಾಣಾಕಪೂರ್ ರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತೀವ್ರ ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸುದ್ದಿಸಂಸ್ಛೆಯೊಂದು ವರದಿ ಮಾಡಿದ್ದು, ದಕ್ಷಿಣ ಮುಂಬೈನಲ್ಲಿರುವ ಇಡಿ ಕಚೇರಿಗೆ ಯೆಸ್_ಬ್ಯಾಂಕ್ ಸಂಸ್ಥಾಪಕ ರಾಣಾಕಪೂರ್ ರನ್ನು ಕರೆದುಕೊಂಡು ಹೋಗಲಾಗಿದ್ದು, ಅಲ್ಲಿ ಅವರನ್ನು ತೀವ್ರ ವಿಚಾರಣೆಗೊಳಪಡಿಸಲಾಗುತ್ತಿದೆ. ನಷ್ಟದಲ್ಲಿರುವ ದಿವಾನ್ ಹೌಸಿಂಗ್ ಫೈನಾನ್ಸ್ ಕಾರ್ಪೋರೇಷನ್ (ಡಿಎಚ್ಎಫ್ಎಲ್) ಜೊತೆ ಯೆಸ್ ಬ್ಯಾಂಕ್ ವ್ಯವಹಾರಕ್ಕೆ ಸಂಬಂಧಿಸಿದಂತೆ ರಾಣಾ ಕಪೂರ್ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಪ್ರಮುಖವಾಗಿ ಯೆಸ್ ಬ್ಯಾಂಕ್ ಡಿಹೆಚ್ ಎಫ್ ಎಲ್ ಸಂಸ್ಥೆಗೆ ಭಾರಿ ಮೊತ್ತದ ಸಾಲ ನೀಡಿದ್ದು ಈ ಸಂಬಂಧ ಇಡಿ ಅಧಿಕಾರಿಗಳು ರಾಣಾ ಕಪೂರ್ ರನ್ನು ಪ್ರಶ್ನೆ ಮಾಡುತ್ತಿದ್ದಾರೆ ಎನ್ನಲಾಗಿದೆ.

ನಿನ್ನೆಯಷ್ಟೇ ರಾಣಾ ಕಪೂರ್ ಅವರ ಮುಂಬೈನಲ್ಲಿರುವ 'ಸಮೃದ್ಧ್ ಮಹಲ್ ಟವರ್' ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ದಾಳಿ ನಡೆಸಿದ್ದರು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್‌ಬಿಐ) ತನ್ನ ಆರ್ಥಿಕ ಸ್ಥಿತಿಯಲ್ಲಿ ಗಂಭೀರ ಕುಸಿತದಿಂದಾಗಿ ತೊಂದರೆಗೀಡಾದ ಖಾಸಗಿ ವಲಯದ ಯೆಸ್ ಬ್ಯಾಂಕ್‌ನ ಮೇಲೆ ಹಿಡಿತ ಸಾಧಿಸಿದ ಕೆಲವೇ ಗಂಟೆಗಳ ನಂತರ ಇಡಿ ರಾಣಾ ಕಪೂರ್ ನಿವಾಸದ ಮೇಲೆ ದಾಳಿ ನಡೆಸಿತ್ತು.

ಇನ್ನು ಅಕ್ರಮ ಹಣ ವಹಿವಾಟು ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಕಪೂರ್ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದ್ದು, ರಾಣಾ ಕಪೂರ್ ಅವರು ದೇಶವನ್ನು ತೊರೆಯದಂತೆ ತಡೆಯಲು ಲುಕ್ ಔಟ್ ನೋಟಿಸ್ ನೀಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com