ರೆಪೊ ದರ ಶೇಕಡಾ 4ಕ್ಕೆ, ರಿವರ್ಸ್ ರೆಪೊ ದರ ಶೇ.3.35ಕ್ಕೆ ಇಳಿಕೆ:ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್

ಕೋವಿಡ್-19 ನಿಂದಾಗಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಉಂಟಾಗಿರುವ ಹಣಕಾಸು ಬಿಕ್ಕಟ್ಟಿನ ಸಂದರ್ಭದಲ್ಲಿ ಹಲವು ಕ್ರಮಗಳನ್ನು ಪ್ರಕಟಿಸಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗವರ್ನರ್ ಶಕ್ತಿಕಾಂತ್ ದಾಸ್ ಶುಕ್ರವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್
ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್

ಮುಂಬೈ: ಕೋವಿಡ್-19 ನಿಂದಾಗಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಉಂಟಾಗಿರುವ ಹಣಕಾಸು ಬಿಕ್ಕಟ್ಟಿನ ಸಂದರ್ಭದಲ್ಲಿ ಹಲವು ಕ್ರಮಗಳನ್ನು ಪ್ರಕಟಿಸಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗವರ್ನರ್ ಶಕ್ತಿಕಾಂತ್ ದಾಸ್ ಶುಕ್ರವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ರೆಪೊ ದರ ಮತ್ತು ರಿವರ್ಸ್ ರೆಪೊ ದರ ಈ ಹೊತ್ತಿನಲ್ಲಿ ಮುಖ್ಯವಾಗಿದ್ದು ಈ ಕುರಿತು ಪ್ರಕಟಿಸಿದ ಶಕ್ತಿಕಾಂತ್ ದಾಸ್ ರೆಪೊ ದರವನ್ನು 40 ಬೇಸಿಸ್ ಪಾಯಿಂಟ್ ಗಳಂತೆ ಶೇಕಡಾ 4.4ರಿಂದ ಶೇಕಡಾ 4ಕ್ಕೆ ಇಳಿಸಿದ್ದಾರೆ. ರಿವರ್ಸ್ ರೆಪೊ ದರ ಶೇಕಡಾ 3.75ರಿಂದ ಶೇಕಡಾ 3.35ಕ್ಕೆ ಇಳಿಸಲಾಗಿದೆ.

ರೆಪೊ ದರ ಇಳಿಕೆಯಿಂದ ಬ್ಯಾಂಕುಗಳಿಗೆ ಹೆಚ್ಚು ಹಣ ಬರಲಿದ್ದು ಇದರಿಂದ ಹೊಸ ಗ್ರಾಹಕರ ಸಾಲದ ಮೇಲಿನ ಬಡ್ಡಿದರವನ್ನು ಬ್ಯಾಂಕುಗಳು ಇಳಿಕೆ ಮಾಡುವ ಸಾಧ್ಯತೆಯಿದೆ. ಹೊಸದಾಗಿ ಗೃಹ ಸಾಲ, ವಾಹನ ಸಾಲಗಳನ್ನು ತೆಗೆದುಕೊಳ್ಳುವವರಿಗೆ ಇದರಿಂದ ಸಹಾಯವಾಗಲಿದೆ.

ರೆಪೊ ದರ: ಬ್ಯಾಂಕುಗಳಲ್ಲಿ ಹಣದ ಕೊರತೆಯಾದರೆ ಅಥವಾ ಹಣದ ಅವಶ್ಯಕತೆಯಿದ್ದರೆ ಆರ್ ಬಿಐ ಬ್ಯಾಂಕುಗಳಿಗೆ ಕೊಡುವ ಸಾಲದ ಹಣದ ಮೇಲೆ ವಿಧಿಸುವ ನಿಶ್ಚಿತ ಬಡ್ಡಿ ದರವಾಗಿದೆ. ಹಣದುಬ್ಬರವನ್ನು ನಿಯಂತ್ರಿಸಲು ವಿತ್ತೀಯ ಅಧಿಕಾರಿಗಳು ರೆಪೊ ದರವನ್ನು ಬಳಸುತ್ತಾರೆ.

ಹಣದುಬ್ಬರದ ಸಂದರ್ಭದಲ್ಲಿ, ಕೇಂದ್ರ ಬ್ಯಾಂಕು ಆರ್ ಬಿಐ ರೆಪೊ ದರವನ್ನು ಹೆಚ್ಚಿಸುತ್ತವೆ, ಸಾಧ್ಯವಾದಷ್ಟು ಬ್ಯಾಂಕುಗಳು ಕೇಂದ್ರ ಬ್ಯಾಂಕಿನಿಂದ ಸಾಲ ಪಡೆಯುವುದನ್ನು ತಡೆಯುತ್ತದೆ. ಇದು ಅಂತಿಮವಾಗಿ ಆರ್ಥಿಕತೆಯಲ್ಲಿ ಹಣ ಪೂರೈಕೆಯನ್ನು ಕಡಿಮೆ ಮಾಡಿ ಹಣದುಬ್ಬರ ನಿಯಂತ್ರಿಸಲು ಸಹಾಯ ಮಾಡುತ್ತದೆ.

ರಿವರ್ಸ್ ರೆಪೊ ದರ: ಇದಕ್ಕೆ ಪ್ರತಿಯಾಗಿ ಆರ್‌ಬಿಐ ಅಲ್ಪಾವಧಿಗೆ ಬ್ಯಾಂಕುಗಳಿಂದ ಹಣವನ್ನು ಸಾಲ ಪಡೆದು ಆ ಹಣದ ಮೇಲೆ ನೀಡುವ ಬಡ್ಡಿದರವನ್ನು ರಿವರ್ಸ್ ರೆಪೊ ದರ ಎಂದು ಕರೆಯುತ್ತಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com