ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಕುಸಿತ, ಗ್ರಾಹಕರ ಮೊಗದಲ್ಲಿ ಮಂದಹಾಸ!

ಸತತ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರ ಮೊಗದಲ್ಲಿ ಇದೀಗ ಮಂದಹಾಸ ಮೂಡುವಂತಾಗಿದೆ. ಹೌದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಸತತ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರ ಮೊಗದಲ್ಲಿ ಇದೀಗ ಮಂದಹಾಸ ಮೂಡುವಂತಾಗಿದೆ. ಹೌದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.

22 ಕ್ಯಾರೆಟ್ ಚಿನ್ನದ ಮೇಲೆ 900 ರುಪಾಯಿ ಇಳಿಕೆಯಾಗಿದ್ದು 10 ಗ್ರಾಂ ಚಿನ್ನದ ಬೆಲೆ 48,250 ರುಪಾಯಿಗೆ ತಲುಪಿದೆ. ಇನ್ನು 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 980 ರುಪಾಯಿ ಇಳಿಕೆಯಾಗಿದ್ದು 10 ಗ್ರಾಂ ಚಿನ್ನದ ಬೆಲೆಯಲ್ಲಿ 52,630 ರುಪಾಯಿಗೆ ತಲುಪಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಹಿರಿಯ ವಿಶ್ಲೇಷಕ ತಪನ್ ಪಟೇಲ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಮೇಲೆ 900 ರುಪಾಯಿ ಇಳಿಕೆಯಾಗಿದ್ದು 10 ಗ್ರಾಂ ಚಿನ್ನದ ಬೆಲೆ 46,200 ರುಪಾಯಿಗೆ ತಲುಪಿದೆ. ಇನ್ನು 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 980 ರುಪಾಯಿ ಇಳಿಕೆಯಾಗಿದ್ದು 10 ಗ್ರಾಂ ಚಿನ್ನದ ಬೆಲೆಯಲ್ಲಿ 50,400 ರುಪಾಯಿಗೆ ತಲುಪಿದೆ

ಇನ್ನು ಬೆಳ್ಳಿ ಬೆಲೆಯಲ್ಲೂ ಇಳಿಕೆ ಕಂಡಿದೆ. 1,588 ರುಪಾಯಿ ಇಳಿಕೆಯಾಗಿದ್ದು 1 ಕೆಜಿ ಬೆಳ್ಳಿಯ ಬೆಲೆ 59,301 ರುಪಾಯಿಗೆ ತಲುಪಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com