ಜಿಎಸ್ ಟಿ ಶೇ.4 ರಷ್ಟು ಜಿಗಿತ, ಸೆಪ್ಟೆಂಬರ್ ನಲ್ಲಿ 95,480 ಕೋಟಿ ರೂ. ಸಂಗ್ರಹ

ದೇಶಾದ್ಯಂತ ಕೊರೋನಾ ವೈರಸ್ ಮತ್ತು ಲಾಕ್ ಡೌನ್ ನಿಂದಾಗಿ ಬಹುತೇಕ ಉದ್ಯಮ ಚಟುವಟಿಕೆ ಸ್ಥಗಿತವಾಗಿದ್ದರಿಂದ ಕಳೆದ ಆರು ತಿಂಗಳಿಂದ ಇಳಿಮುಖವಾಗಿದ್ದ ಜಿಎಸ್ ಟಿ ಆದಾಯ ಈಗ ಚೇತರಿಸಿಕೊಂಡಿದ್ದು, ಶೇ. 4ರಷ್ಟು ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶಾದ್ಯಂತ ಕೊರೋನಾ ವೈರಸ್ ಮತ್ತು ಲಾಕ್ ಡೌನ್ ನಿಂದಾಗಿ ಬಹುತೇಕ ಉದ್ಯಮ ಚಟುವಟಿಕೆ ಸ್ಥಗಿತವಾಗಿದ್ದರಿಂದ ಕಳೆದ ಆರು ತಿಂಗಳಿಂದ ಇಳಿಮುಖವಾಗಿದ್ದ ಜಿಎಸ್ ಟಿ ಆದಾಯ ಈಗ ಚೇತರಿಸಿಕೊಂಡಿದ್ದು, ಶೇ. 4ರಷ್ಟು ಏರಿಕೆಯಾಗಿದೆ.

ಕಳೆದ ಸೆಪ್ಟೆಂಬರ್ ತಿಂಗಳಲ್ಲಿ 95,480 ಕೋಟಿ ರುಪಾಯಿ ಜಿಎಸ್ ಟಿ ಸಂಗ್ರಹವಾಗಿದೆ. ಈ ವರ್ಷದ ಮಾರ್ಚ್ ತಿಂಗಳಲ್ಲಿ ಲಾಕ್ ಡೌನ್ ಆರಂಭವಾದ ನಂತರ ಸಂಗ್ರಹವಾದ ಅತಿ ದೊಡ್ಡ ಮೊತ್ತ ಇದು. ಕಳೆದ ಆಗಸ್ಟ್ ಗೆ ಹೋಲಿಸಿದರೆ 10.4% ಹಾಗೂ ಕಳೆದ ವರ್ಷದ ಸೆಪ್ಟೆಂಬರ್ ಗೆ ಹೋಲಿಸಿದರೆ 4% ಹೆಚ್ಚಳವಾಗಿದೆ ಎಂದು ಹಣಕಾಸು ಸಚಿವಾಲಯದ ಪ್ರಕಟಣೆಯಲ್ಲಿ ತಿಳಿಸಿದೆ.

ಒಟ್ಟು ಸಂಗ್ರಹದಲ್ಲಿ ಕೇಂದ್ರ ಸರಕು ಮತ್ತು ಸೇವಾ ತೆರಿಗೆ(ಸಿಜಿಎಸ್‌ಟಿ) 17,741 ಕೋಟಿ ರೂ., ರಾಜ್ಯ ಸರಕು ಮತ್ತು ಸೇವಾ ತೆರಿಗೆ (ಎಸ್‌ಜಿಎಸ್‌ಟಿ) 23,131 ಕೋಟಿ ರೂ., ಸಮಗ್ರ ಸರಕು ಮತ್ತು ಸೇವಾ ತೆರಿಗೆ (ಐಜಿಎಸ್‌ಟಿ) 47,484 ಕೋಟಿ ರೂ. (ಆಮದು ಮೇಲೆ ಸಂಗ್ರಹಿಸಿದ 22,442 ಕೋಟಿ ರೂ. ಸರಕುಗಳ) ಮತ್ತು ಸೆಸ್ 7,124 ಕೋಟಿ ರೂ. ಸಂಗ್ರಹವಾಗಿದೆ.

ಮಾರ್ಚ್ 25 ರಿಂದ ದೇಶಾದ್ಯಂತ ಲಾಕ್‌ಡೌನ್ ಜಾರಿಗೊಳಿಸಿದ್ದರಿಂದ ಆರ್ಥಿಕ ಚಟುವಟಿಕೆಗಳಿಗೆ ಅಡ್ಡಿಯುಂಟಾದ ಕಾರಣ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಜಿಎಸ್‌ಟಿ ಸಂಗ್ರಹದಲ್ಲಿ ತೀವ್ರ ಕುಸಿತವಾಗಿತ್ತು. ಆದರೆ ಜೂನ್ ಮತ್ತು ಜುಲೈ ತಿಂಗಳಲ್ಲಿ ಜಿಎಸ್‌ಟಿ ಸಂಗ್ರಹ ಏರಿಕೆಯಾಗಿತ್ತು. ಆಗಸ್ಟ್ ನಲ್ಲಿ ಮತ್ತೆ ಕಡಿಮೆಯಾಗಿತ್ತು. ಈಗ ಸೆಪ್ಟೆಂಬರ್ ನಲ್ಲಿ ಮತ್ತೆ ಚೇತರಿಸಿಕೊಂಡಿದೆ.

ಮಹಾರಾಷ್ಟ್ರ 13,546 ಕೋಟಿ ರೂಪಾಯಿ ಸಂಗ್ರಹ ಮಾಡುವ ಮೂಲಕ ಅಗ್ರಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ ತಮಿಳುನಾಡು 6454 ಕೋಟಿ ರೂಪಾಯಿ, ಗುಜರಾತ್ ನಲ್ಲಿ 6090 ಕೋಟಿ ರೂಪಾಯಿ, ಕರ್ನಾಟಕದಲ್ಲಿ 6050ಕೋಟಿ ರೂ ಸಂಗ್ರಹಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com