ಆಗಸ್ಟ್ ತಿಂಗಳಲ್ಲಿ 86,449 ಕೋಟಿ ರೂ. ಜಿಎಸ್ ಟಿ ಸಂಗ್ರಹ

ದೇಶಾದ್ಯಂತ ಕೊರೋನಾ ವೈರಸ್ ಮತ್ತು ಲಾಕ್ ಡೌನ್ ನಿಂದಾಗಿ ಬಹುತೇಕ ಉದ್ಯಮ ಚಟುವಟಿಕೆ ಸ್ಥಗಿತವಾಗಿದ್ದರಿಂದ ಜಿಎಸ್ ಟಿ ಆದಾಯದಲ್ಲಿ ಇಳಿಕೆಯಾಗಿದ್ದು, ಆಗಸ್ಟ್ ತಿಂಗಳಲ್ಲಿ 86,449 ಕೋಟಿ ರೂ.ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಮಂಗಳವಾರ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶಾದ್ಯಂತ ಕೊರೋನಾ ವೈರಸ್ ಮತ್ತು ಲಾಕ್ ಡೌನ್ ನಿಂದಾಗಿ ಬಹುತೇಕ ಉದ್ಯಮ ಚಟುವಟಿಕೆ ಸ್ಥಗಿತವಾಗಿದ್ದರಿಂದ ಜಿಎಸ್ ಟಿ ಆದಾಯದಲ್ಲಿ ಇಳಿಕೆಯಾಗಿದ್ದು, ಆಗಸ್ಟ್ ತಿಂಗಳಲ್ಲಿ 86,449 ಕೋಟಿ ರೂ.ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಮಂಗಳವಾರ ತಿಳಿಸಿದೆ.

ಜುಲೈ ತಿಂಗಳಲ್ಲಿ 87,422 ಕೋಟಿ ರೂಪಾಯಿ ಜಿಎಸ್ ಟಿ ಸಂಗ್ರಹವಾಗಿತ್ತು. ಆದರೆ ಆಗಸ್ಟ್ ನಲ್ಲಿ ಮತ್ತೆ ಕಡಿಮೆಯಾಗಿದೆ. ಕಳೆದ ವರ್ಷ ಆಗಸ್ಟ್ ನಲ್ಲಿ ಶೇ. 88 ರಷ್ಟು ಅಂದರೆ 98,202 ಕೋಟಿ ರೂಪಾಯಿ ಜಿಎಸ್ ಟಿ ಸಂಗ್ರಹವಾಗಿತ್ತು. ಆದರೆ ಈ ವರ್ಷ ಸರ್ಕಾರಕ್ಕೆ ಕೇವಲ 86,449 ಕೋಟಿ ರೂಪಾಯಿ ಆದಾಯ ಸಂಗ್ರಹಣೆಯಾಗಿದೆ 

ಒಟ್ಟು ಸಂಗ್ರಹದಲ್ಲಿ ಕೇಂದ್ರ ಸರಕು ಮತ್ತು ಸೇವಾ ತೆರಿಗೆ (ಸಿಜಿಎಸ್‌ಟಿ) 15,906 ಕೋಟಿ ರೂ., ರಾಜ್ಯ ಸರಕು ಮತ್ತು ಸೇವಾ ತೆರಿಗೆ (ಎಸ್‌ಜಿಎಸ್‌ಟಿ) 21,064 ಕೋಟಿ ರೂ., ಸಮಗ್ರ ಸರಕು ಮತ್ತು ಸೇವಾ ತೆರಿಗೆ (ಐಜಿಎಸ್‌ಟಿ) 42,264 ಕೋಟಿ ರೂ. (ಆಮದು ಮೇಲೆ ಸಂಗ್ರಹಿಸಿದ 19,179 ಕೋಟಿ ರೂ. ಸರಕುಗಳ) ಮತ್ತು ಸೆಸ್ 7,215 ಕೋಟಿ ರೂ. ಸಂಗ್ರಹವಾಗಿದೆ.

ಮಾರ್ಚ್ 25 ರಿಂದ ದೇಶಾದ್ಯಂತ ಲಾಕ್‌ಡೌನ್ ಜಾರಿಗೊಳಿಸಿದ್ದರಿಂದ ಆರ್ಥಿಕ ಚಟುವಟಿಕೆಗಳಿಗೆ ಅಡ್ಡಿಯುಂಟಾದ ಕಾರಣ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಜಿಎಸ್‌ಟಿ ಸಂಗ್ರಹದಲ್ಲಿ ತೀವ್ರ ಕುಸಿತವಾಗಿತ್ತು. ಆದರೆ ಜೂನ್ ಮತ್ತು ಜುಲೈ ತಿಂಗಳಲ್ಲಿ ಜಿಎಸ್‌ಟಿ ಸಂಗ್ರಹ ಏರಿಕೆಯಾಗಿತ್ತು. ಆಗಸ್ಟ್ ನಲ್ಲಿ ಮತ್ತೆ ಕಡಿಮೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com