ಚಿನ್ನದ ಬೆಲೆ ಮತ್ತೆ 287 ರೂ. ಏರಿಕೆ, 10 ಗ್ರಾಂ ಹಳದಿ ಲೋಹಕ್ಕೆ 52,391 ರೂಪಾಯಿ

ದೇಶದಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಲೇ ಇದ್ದು, ಗುರುವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 287 ರೂ. ದಾಖಲೆಯ ಏರಿಕೆಯಾಗುವ ಮೂಲಕ 10. ಗ್ರಾಂ ಚಿನ್ನದ ಬೆಲೆ 52,391 ರೂಪಾಯಿಗೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಲೇ ಇದ್ದು, ಗುರುವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 287 ರೂ. ದಾಖಲೆಯ ಏರಿಕೆಯಾಗುವ ಮೂಲಕ 10. ಗ್ರಾಂ ಚಿನ್ನದ ಬೆಲೆ 52,391 ರೂಪಾಯಿಗೆ ಏರಿಕೆಯಾಗಿದೆ.

ಇನ್ನು ಚಿನ್ನದ ಜೊತೆ ಬೆಳ್ಳಿ ಬೆಲೆಯೂ ಏರಿಕೆಯಾಗಿದ್ದು, ಪ್ರತಿ ಕೆಜಿಗೆ 875 ರೂಪಾಯಿ ಹೆಚ್ಚಾಗಿ 69,950 ರೂಪಾಯಿಗೆ ತಲುಪಿದೆ.

ಅಂತರರಾಷ್ಟ್ರೀಯ ಚಿನ್ನದ ಬೆಲೆಗಳು ಏರಿಕೆಯಾಗಿದ್ದು, ರೂಪಾಯಿ ಮೌಲ್ಯ ಮತ್ತೆ ಕುಸಿತಗೊಂಡಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಹಿರಿಯ ವಿಶ್ಲೇಷಕ ತಪನ್ ಪಟೇಲ್ ಹೇಳಿದ್ದಾರೆ.

ಒಟ್ಟಾರೆ ದೇಶದ ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಇದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನಾಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com