ಜುಲೈನಲ್ಲಿ ಕೈಗಾರಿಕಾ ಉತ್ಪಾದನೆ ಪ್ರಮಾಣ ಶೇ.10.4 ರಷ್ಟು ಕುಸಿತ

ಪ್ರಮುಖವಾಗಿ ಗಣಿಗಾರಿಕೆ ಮತ್ತು ವಿದ್ಯುತ್ ವಲಯದಲ್ಲಿ ಗಣನೀಯ ಕುಸಿತದ ಪರಿಣಾಮ ಜುಲೈನಲ್ಲಿ ದೇಶದ ಕೈಗಾರಿಕಾ ಉತ್ಪಾದನೆ ಪ್ರಮಾಣ ಶೇ.10.4 ರಷ್ಟು ಕುಸಿತಕಂಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಪ್ರಮುಖವಾಗಿ ಗಣಿಗಾರಿಕೆ ಮತ್ತು ವಿದ್ಯುತ್ ವಲಯದಲ್ಲಿ ಗಣನೀಯ ಕುಸಿತದ ಪರಿಣಾಮ ಜುಲೈನಲ್ಲಿ ದೇಶದ ಕೈಗಾರಿಕಾ ಉತ್ಪಾದನೆ ಪ್ರಮಾಣ ಶೇ.10.4 ರಷ್ಟು ಕುಸಿತಕಂಡಿದೆ.

ಕೇಂದ್ರ ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿರುವ ಅಂಕಿ-ಸಂಖ್ಯೆಗಳ ಪ್ರಕಾರ, ಜುಲೈನಲ್ಲಿ ಕೈಗಾರಿಕಾ ಉತ್ಪಾದನಾ ಸೂಚ್ಯಂಕ(ಐಐಪಿ) ಶೇ.11.1 ರಷ್ಟು, ಗಣಿಗಾರಿಕೆ ಸೂಚ್ಯಂಕ ಶೇ.2.5 ಮತ್ತು ವಿದ್ಯುತ್ ವಲಯ ಶೇ.13 ರಷ್ಟು ಕುಸಿತ ದಾಖಲಿಸಿದೆ.

ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯುವದಕ್ಕಾಗಿ ಕೇಂದ್ರ ಸರ್ಕಾರ ರಾಷ್ಟ್ರವ್ಯಾಪಿ ಲಾಕ್‌ಡೌನ್ ಘೋಷಿಸಿದ ನಂತರ ಮಾರ್ಚ್ ಅಂತ್ಯದಿಂದ ಕೈಗಾರಿಕಾ ವಲಯದ ಬಹುತೇಕ ಸಂಸ್ಥೆಗಳು ಕಾರ್ಯನಿರ್ವಹಿಸಿಲ್ಲ. ಹೀಗಾಗಿ ಕೈಗಾರಿಕಾ ಉತ್ಪಾದನೆ ಭಾರೀ ಕುಸಿತ ಕಂಡಿದೆ.

ಈಗ ಲಾಕ್ ಡೌನ್ ನಿರ್ಬಂಧಗಳನ್ನು ಹಂತ ಹಂತವಾಗಿ ತೆರವುಗೊಳಿಸುತ್ತಿರುವುದರಿಂದ ಕೈಗಾರಿಕಾ ಚಟುವಟಿಕೆಗಳು ಪುನರಾರಂಭಗೊಳ್ಳುತ್ತಿವೆ ಎಂದು ಅಂಕಿ-ಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com