ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ 25 ರೂ. ಹೆಚ್ಚಳ: ವಿವಿಧ ಮಹಾ ನಗರಗಳಲ್ಲಿ ಬೆಲೆ ಹೀಗಿದೆ...

ತೈಲ ಕಂಪೆನಿಗಳು ಮತ್ತೊಮ್ಮೆ ದೇಶೀಯ ಎಲ್ ಪಿಜಿ ಸಿಲೆಂಡರ್ ಗಳ ಬೆಲೆಯನ್ನು ಹೆಚ್ಚಳ ಮಾಡಿದೆ. ಎಲ್ ಪಿಜಿ ಸಿಲೆಂಡರ್ ಬೆಲೆ 25 ರೂಪಾಯಿ ಹೆಚ್ಚಳವಾಗಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ತೈಲ ಕಂಪೆನಿಗಳು ಮತ್ತೊಮ್ಮೆ ದೇಶೀಯ ಎಲ್ ಪಿಜಿ ಸಿಲೆಂಡರ್ ಗಳ ಬೆಲೆಯನ್ನು ಹೆಚ್ಚಳ ಮಾಡಿದೆ. ಎಲ್ ಪಿಜಿ ಸಿಲೆಂಡರ್ ಬೆಲೆ 25 ರೂಪಾಯಿ ಹೆಚ್ಚಳವಾಗಿದೆ. 

ರಾಜಧಾನಿ ದೆಹಲಿಯಲ್ಲಿ 14.2 ಕೆಜಿ ಎಲ್ ಪಿಜಿ ಸಿಲೆಂಡರ್ ಬೆಲೆ ಈಗ 859 ರೂಪಾಯಿ 5 ಪೈಸೆಯಾಗಿದೆ. ನಿನ್ನೆಯವರೆಗೆ 834 ರೂಪಾಯಿ 50 ಪೈಸೆಯಾಗಿತ್ತು. ಕಳೆದ ಜುಲೈ 1ರಂದು ಎಲ್ ಪಿಜಿ ಸಿಲೆಂಡರ್ ಬೆಲೆ 25 ರೂಪಾಯಿ 50 ಪೈಸೆ ಹೆಚ್ಚಳವಾಗಿತ್ತು.

ಮುಂಬೈನಲ್ಲಿಯೂ ಸಹ 14.2 ಕೆಜಿ ಎಲ್ಪಿಜಿ ಸಿಲಿಂಡರ್ ದರ ಈಗ 859.5 ರೂ, ನಿನ್ನೆಯವರೆಗೆ 834.50 ರೂ ಆಗಿತ್ತು. ಕೋಲ್ಕತ್ತಾದಲ್ಲಿ ಎಲ್‌ಪಿಜಿ ಸಿಲಿಂಡರ್ ದರ ಪ್ರತಿ ಸಿಲಿಂಡರ್‌ಗೆ ರೂ 861 ರಿಂದ ರೂ 886 ಕ್ಕೆ ಏರಿಕೆಯಾಗಿದೆ. ಚೆನ್ನೈನ ಎಲ್‌ಪಿಜಿ ಸಿಲಿಂಡರ್‌ಗಾಗಿ ಇಂದಿನಿಂದ 875.50 ರೂಗಳನ್ನು ಪಾವತಿಸಬೇಕಾಗುತ್ತದೆ, ಅದು ನಿನ್ನೆಯವರೆಗೆ 850.50 ರೂಪಾಯಿ ಆಗಿತ್ತು.

ಉತ್ತರ ಪ್ರದೇಶದ ಲಕ್ನೋದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಾಗಿ 897.5 ರೂ. ಪಾವತಿಸಬೇಕಾಗುತ್ತದೆ. ಗುಜರಾತ್‌ನ ಅಹಮದಾಬಾದ್‌ನಲ್ಲಿ ಎಲ್‌ಪಿಜಿಗೆ 866.50 ರೂಪಾಯಿ ಪಾವತಿಸಬೇಕಾಗುತ್ತದೆ.

ಸಾಮಾನ್ಯವಾಗಿ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪ್ರತಿ ತಿಂಗಳ ಮೊದಲ ದಿನ ಗ್ಯಾಸ್ ಸಿಲಿಂಡರ್‌ಗಳ (ಎಲ್‌ಪಿಜಿ ಬೆಲೆ) ಬೆಲೆಯನ್ನು ಬದಲಾಯಿಸುತ್ತವೆ. 2021 ವರ್ಷದ ಆರಂಭದಲ್ಲಿ ಜನವರಿಯಲ್ಲಿ, ದೆಹಲಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 694 ಇತ್ತು, ಇದನ್ನು ಫೆಬ್ರವರಿಯಲ್ಲಿ ಪ್ರತಿ ಸಿಲಿಂಡರ್‌ಗೆ ರೂ 719 ಕ್ಕೆ ಹೆಚ್ಚಿಸಲಾಯಿತು. ಫೆಬ್ರವರಿ 15 ರಂದು ಅದರ ಬೆಲೆಯನ್ನು 769 ರೂ.ಗೆ ಹೆಚ್ಚಿಸಲಾಯಿತು. ಇದರ ನಂತರ, ಫೆಬ್ರವರಿ 25 ರಂದು ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 794 ರೂ.ಗೆ ಹೆಚ್ಚಿಸಲಾಯಿತು. ಕಳೆದ ಮಾರ್ಚ್ ತಿಂಗಳಲ್ಲಿ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 819 ರೂ.ಗೆ ಹೆಚ್ಚಿಸಲಾಯಿತು. ಏಪ್ರಿಲ್ ಆರಂಭದಲ್ಲಿ 10 ರೂಪಾಯಿ ಹೆಚ್ಚಳವಾಗಿತ್ತು. ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ದರವನ್ನು ಪ್ರತಿ ಸಿಲಿಂಡರ್‌ಗೆ 819 ರೂಪಾಯಿಯಿಂದ 809 ರೂಪಾಯಿಗೆ ಇಳಿಸಲಾಯಿತು.

ಬೆಂಗಳೂರಿನಲ್ಲಿ ಇಂದಿನ ಬೆಲೆ: ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ 14.2 ಕೆಜಿ ತೂಕದ ಎಲ್ ಪಿಜಿ ಸಿಲೆಂಡರ್ ಬೆಲೆ 862 ರೂಪಾಯಿ 50 ಪೈಸೆಯಾಗಿದೆ. 

ಸಿಲಿಂಡರ್ ಬೆಲೆ ಹೆಚ್ಚಳವಾಗುತ್ತಿದ್ದಂತೆ ಎಂದಿನಂತೆ ಪ್ರತಿಪಕ್ಷ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರವನ್ನು ಟೀಕಿಸುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com