ಕೊರೋನಾ ಆರ್ಥಿಕ ಸಂಕಷ್ಟದ ನಡುವೆ ಜನತೆಗೆ ಶಾಕ್: ಎಲ್‌ಪಿಜಿ ಸಿಲಿಂಡರ್‌ ಬೆಲೆ ರೂ. 25.50 ಏರಿಕೆ

ಇಂದಿನಿಂದ ಜಾರಿಗೆ ಬರುವಂತೆ ಸಬ್ಸಿಡಿ ಸಹಿತ ಎಲ್‌ಪಿಜಿಯ ಬೆಲೆ ಒಂದು ಸಿಲಿಂಡರ್‌ಗೆ 25.50 ರೂ. ಹೆಚ್ಚಳವಾಗಿದೆ. ಕೊರೋನಾದಿಂದ ಸಂಕಷ್ಟದಲ್ಲಿರುವ ಸಾರ್ವಜನಿಕರಿಗೆ ಇದರಿಂದಾಗಿ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ಇಂದಿನಿಂದ ಜಾರಿಗೆ ಬರುವಂತೆ ಸಬ್ಸಿಡಿ ಸಹಿತ ಎಲ್‌ಪಿಜಿಯ ಬೆಲೆ ಒಂದು ಸಿಲಿಂಡರ್‌ಗೆ 25.50 ರೂ. ಹೆಚ್ಚಳವಾಗಿದೆ. ಕೊರೋನಾದಿಂದ ಸಂಕಷ್ಟದಲ್ಲಿರುವ ಸಾರ್ವಜನಿಕರಿಗೆ ಇದರಿಂದಾಗಿ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಪ್ರಸ್ತುತ 14.2 ಕೆಜಿ ತೂಕದ ಗೃಹಬಳಕೆ ಸಿಲಿಂಡರ್‌ಗಳಿಗೆ ದೆಹಲಿಯಲ್ಲಿ 834.50 ರೂ. ಇದೆ.

ಇನ್ನು 19 ಕೆಜಿ ಸಿಲಿಂಡರ್‌ನ ಬೆಲೆಯನ್ನು ಸಹ 76 ರೂ. ಹೆಚ್ಚಿಸಲಾಗಿದ್ದು ದೆಹಲಿಯಲ್ಲಿ 1,550 ರೂ. ನಿಗದಿಯಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.

ದೇಶದಲ್ಲಿ ಪ್ರತಿ ತಿಂಗಳ ಪ್ರಾರಂಭದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಪರಿಶೀಲನೆಗೆ ಒಳಪಡುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com