ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ದೇಶಾದ್ಯಂತ ಪೆಟ್ರೋಲ್ ದರ ಏರಿಕೆ: ಯಥಾಸ್ಥಿತಿ ಕಾಯ್ದುಕೊಂಡ ಡೀಸೆಲ್ ಬೆಲೆ

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿದಿನ ಏರಿಳಿತಗಳು ಉಂಟಾಗುತ್ತಲೇ ಇದ್ದು, ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳೂ ಶುಕ್ರವಾರ ಕೂಡ ಪೆಟ್ರೋಲ್ ದರವನ್ನು 37 ಪೈಸೆಯಷ್ಟು ಏರಿಕೆ ಮಾಡಿದೆ. ಆದರೆ, ಡೀಸೆಲ್ ದರವನ್ನು ಯಥಾಸ್ಥಿತಿ ಕಾಯ್ದುಕೊಂಡಿದೆ. 

ನವದೆಹಲಿ: ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿದಿನ ಏರಿಳಿತಗಳು ಉಂಟಾಗುತ್ತಲೇ ಇದ್ದು, ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳೂ ಶುಕ್ರವಾರ ಕೂಡ ಪೆಟ್ರೋಲ್ ದರವನ್ನು 37 ಪೈಸೆಯಷ್ಟು ಏರಿಕೆ ಮಾಡಿದೆ. ಆದರೆ, ಡೀಸೆಲ್ ದರವನ್ನು ಯಥಾಸ್ಥಿತಿ ಕಾಯ್ದುಕೊಂಡಿದೆ. 

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮೂಲಗಳ ಪ್ರಕಾರ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 37 ಪೈಸೆ ಏರಿಕೆಯಾಗಿದ್ದರೆ, ಡೀಸೆಲ್ ದರವನ್ನು ಯಥಾಸ್ಥಿತಿ ಕಾಯ್ದುಕೊಂಡಿವೆ ಎಂದು ತಿಳಿದುಬಂದಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 102.54ಕ್ಕೆ ಏರಿಕೆಯಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 99.22 ಕ್ಕೆ ತಲುಪಿದೆ. 

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 105.3 ಕ್ಕೆ ಏರಿಕೆಯಾಗಿದ್ದು, ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 99.1 ಕ್ಕೆ ಏರಿಕೆಯಾಗಿದೆ. ಇನ್ನು ಚೆನ್ನೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 100.18ಕ್ಕೆ ತಲುಪಿದೆ.

Related Stories

No stories found.

Advertisement

X
Kannada Prabha
www.kannadaprabha.com