ಕೋವಿಡ್-19 ಪರಿಹಾರ ಸಾಮಗ್ರಿ ಆಮದು: ಆರೋಗ್ಯ ಸೆಸ್ ಗೆ ವಿನಾಯಿತಿ ಘೋಷಿಸಿದ ಕೇಂದ್ರ ಸರ್ಕಾರ

ಕೋವಿಡ್ ಸಂಬಂಧಿತ ಪರಿಹಾರ ಸಾಮಗ್ರಿಗಳ ಆಮದಿಗೆ ಮೂಲ ಕಸ್ಟಮ್ಸ್ ಸುಂಕ ಹಾಗೂ ಆರೋಗ್ಯ ಸೆಸ್ ಗೆ ಕೇಂದ್ರ ಸರ್ಕಾರ ತಾತ್ಕಾಲಿಕ ವಿನಾಯಿತಿ ನೀಡಿದೆ. 
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಕೋವಿಡ್ ಸಂಬಂಧಿತ ಪರಿಹಾರ ಸಾಮಗ್ರಿಗಳ ಆಮದಿಗೆ ಮೂಲ ಕಸ್ಟಮ್ಸ್ ಸುಂಕ ಹಾಗೂ ಆರೋಗ್ಯ ಸೆಸ್ ಗೆ ಕೇಂದ್ರ ಸರ್ಕಾರ ತಾತ್ಕಾಲಿಕ ವಿನಾಯಿತಿ ನೀಡಿದೆ.

ಈ ಸಂಬಂಧ ಸಚಿವಾಲಯ ಅಧಿಸೂಚನೆ ಹೊರಡಿಸಿದ್ದು "ಕೋವಿಡ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೋವಿಡ್ ಸಂಬಂಧಿತ ಪರಿಹಾರ ಸಾಮಗ್ರಿಗಳ ಆಮದಿಗೆ ಮೂಲ ಕಸ್ಟಮ್ಸ್ ಸುಂಕ ಹಾಗೂ ಆರೋಗ್ಯ ಸೆಸ್ ಗೆ ತಾತ್ಕಾಲಿಕ ವಿನಾಯಿತಿ ನೀಡಿದೆ" ಎಂದು ಹೇಳಿದೆ.

ಈ ವಿನಾಯಿತಿ ತಾತ್ಕಾಲಿಕ ಮತ್ತು ಜೂನ್ 30, 2021 ರವರೆಗೆ ಮಾಡಿದ ಎಲ್ಲಾ ನಿರ್ದಿಷ್ಟ ಆಮದುಗಳಿಗೆ ಅನ್ವಯಿಸುತ್ತದೆ. ಈ ವಿನಾಯಿತಿಯು ಈಗಾಗಲೇ ಆಮದು ಮಾಡಿಕೊಂಡ ಸರಕುಗಳನ್ನು ಒಳಗೊಳ್ಳುತ್ತದೆ ಆದರೆವಿನಾಯಿತಿ ನೀಡಲು ಪ್ರಾರಂಭವಾಗುವ ದಿನಾಂಕ ಯಾವುದೆಂದು ಸ್ಪಷ್ಟವಾಗಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com