ಐಟಿ ರಿಟರ್ನ್ ಸಲ್ಲಿಕೆ ಗಡುವು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಿದ ಕೇಂದ್ರ

2020-21ನೇ ಸಾಲಿನ ಹಣಕಾಸು ವರ್ಷದ ವೈಯಕ್ತಿಕ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ದಿನಾಂಕವನ್ನು ಕೇಂದ್ರ ಸರ್ಕಾರ ಎರಡು ತಿಂಗಳವರೆಗೆ ಅಂದರೆ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: 2020-21ನೇ ಸಾಲಿನ ಹಣಕಾಸು ವರ್ಷದ ವೈಯಕ್ತಿಕ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ದಿನಾಂಕವನ್ನು ಕೇಂದ್ರ ಸರ್ಕಾರ ಎರಡು ತಿಂಗಳವರೆಗೆ ಅಂದರೆ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದೆ.

ಇನ್ನು ಕೇಂದ್ರೀಯ ನೇರ ತೆರಿಗೆ ಮಂಡಳಿ(ಸಿಬಿಡಿಟಿ) ಕಂಪೆನಿಗಳಿಗೆ ಐಟಿಆರ್ ಸಲ್ಲಿಸುವ ಗಡುವನ್ನು ನವೆಂಬರ್ 30 ರವರೆಗೆ ವಿಸ್ತರಿಸಿದೆ.

ಆದಾಯ ತೆರಿಗೆ ಕಾನೂನಿನ ಪ್ರಕಾರ, ಲೆಕ್ಕಪರಿಶೋಧನೆಯ ಅಗತ್ಯವಿಲ್ಲದ ಮತ್ತು ಸಾಮಾನ್ಯವಾಗಿ ಐಟಿಆರ್ -1 ಅಥವಾ ಐಟಿಆರ್ -4 ಬಳಸಿ ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ವ್ಯಕ್ತಿಗಳಿಗೆ ಐಟಿಆರ್ ಸಲ್ಲಿಸಲು ಅಂತಿಮ ದಿನಾಂಕ ಜುಲೈ 31 ಆಗಿತ್ತು. ಅದನ್ನು ಈಗ ಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ.

ಕಂಪನಿಗಳು ಅಥವಾ ಸಂಸ್ಥೆಗಳ ತೆರಿಗೆ ಪಾವತಿದಾರರಿಗೆ ಆಡಿಟ್ ಮಾಡಬೇಕಾದ ಗಡುವು ಅಕ್ಟೋಬರ್ 31 ಆಗಿತ್ತು. ಅದನ್ನು ನವೆಂಬರ್ 30ರ ವರೆಗೆ ವಿಸ್ತರಿಸಲಾಗಿದೆ.

"ತೀವ್ರವಾದ ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ತೆರಿಗೆದಾರರಿಗೆ ರಿಲೀಫ್ ನೀಡಲು" ಕೆಲವು ತೆರಿಗೆ ಅನುಸರಣೆಗಾಗಿ ಸಮಯ ಮಿತಿಗಳ ವಿಸ್ತರಣೆಯನ್ನು ನೀಡಲಾಗುತ್ತಿದೆ ಎಂದು ಸುತ್ತೋಲೆಯಲ್ಲಿ ಸಿಬಿಡಿಟಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com