ನವದೆಹಲಿ: ಸತತ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ದೇಶದ ಜನತೆಗೆ ತಿಂಗಳ ಆರಂಭ ದಿನ ಮತ್ತೊಂದು ಶಾಕ್ ನೀಡಲಾಗಿದೆ. ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಜೊತೆ ವಾಣಿಜ್ಯ ಬಳಕೆಯ ಸಿಲೆಂಡರ್ ಬೆಲೆ ಕೂಡ ಏರಿಕೆಯಾಗಿದೆ.
ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಂದಿನಿಂದ 266 ರೂಪಾಯಿ ಹೆಚ್ಚಳವಾಗಿದ್ದು 19 ಕೆಜಿ ಸಿಲೆಂಡರ್ ಗೆ 2 ಸಾವಿರ ರೂಪಾಯಿ 50 ಪೈಸೆ ನೀಡಬೇಕು. ಈ ಹಿಂದೆ ಅದರ ಬೆಲೆ 1,734 ರೂಪಾಯಿಯಾಗಿತ್ತು. ಗೃಹ ಬಳಕೆಯ ಸಿಲಿಂಡರ್ ಬೆಲೆ ಹೆಚ್ಚಳವಾಗಿಲ್ಲ.
ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಹೆಚ್ಚಳವಾಗುತ್ತಿದ್ದಂತೆ ಹೊಟೇಲ್ ಗಳಲ್ಲಿ ಆಹಾರ ಪದಾರ್ಥಗಳ ಬೆಲೆ, ಬೇಕರಿಗಳಲ್ಲಿನ ತಿಂಡಿ-ತಿನಿಸುಗಳಲ್ಲಿ ಸಹ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ.
Advertisement