ಕ್ರಿಪ್ಟೋಕರೆನ್ಸಿ ಬಿಲ್‌: ಬದಲಾವಣೆಯ ಬಗ್ಗೆ ಸಂಸತ್ತಿಗೆ ಮಾಹಿತಿ ನೀಡಿದ ನಿರ್ಮಲಾ ಸೀತಾರಾಮನ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಸರ್ಕಾರ ಹೊಸ ಕ್ರಿಪ್ಟೋಕರೆನ್ಸಿ ಮಸೂದೆಯಲ್ಲಿ ಮಾಡಿರುವ ಬದಲಾವಣೆಯ ಬಗ್ಗೆ ಸಂಸತ್ತಿಗೆ ಮಾಹಿತಿ ನೀಡಿದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಸರ್ಕಾರ ಹೊಸ ಕ್ರಿಪ್ಟೋಕರೆನ್ಸಿ ಮಸೂದೆಯಲ್ಲಿ ಮಾಡಿರುವ ಬದಲಾವಣೆಯ ಬಗ್ಗೆ ಸಂಸತ್ತಿಗೆ ಮಾಹಿತಿ ನೀಡಿದರು.

ಇಂದು ಸಂಸತ್ತಿನಲ್ಲಿ ಮಾತನಾಡಿದ ಹಣಕಾಸು ಸಚಿವರು, ಕ್ಯಾಬಿನೆಟ್ ಅನುಮತಿ ದೊರೆತ ನಂತರ ಸರ್ಕಾರವು ಕ್ರಿಪ್ಟೋಕರೆನ್ಸಿಗಳ ಮೇಲೆ ಸಂಪೂರ್ಣವಾಗಿ ಹೊಸ ಮಸೂದೆಯನ್ನು ತರಲಿದೆ. ಅಲ್ಲದೇ ಹಿಂದಿನ ಮಸೂದೆಯನ್ನು ಮರುರೂಪಿಸಲಾಗಿದೆ ಎಂದು ಹೇಳಿದರು.

ಲೋಕಸಭೆಯ ಬುಲೆಟಿನ್‌ನಲ್ಲಿ ಪಟ್ಟಿ ಮಾಡಲಾದ ಕ್ರಿಪ್ಟೋ ಬಿಲ್‌ನ ವಿವರಣೆಯು ಹಳೆಯದಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಮರುರೂಪಿಸಲಾದ ಕ್ರಿಪ್ಟೋ ಮಸೂದೆಯನ್ನು ಶೀಘ್ರದಲ್ಲೇ ಅನುಮೋದನೆಗಾಗಿ ಸಂಪುಟದ ಮುಂದೆ ಮಂಡಿಸಲಾಗುವುದು ಎಂದು ಸಚಿವರು ತಿಳಿಸಿದರು.

"ಉಲ್ಲೇಖಿಸಲಾದ ಮಸೂದೆಯು ಹಳೆಯ ಮಸೂದೆಯಾಗಿದೆ ಮತ್ತು ಹೊಸ ಮಸೂದೆಯನ್ನು ಕಾರ್ಯಗತಗೊಳಿಸಲಾಗುತ್ತದೆ. ಅದನ್ನು ಶೀಘ್ರದಲ್ಲೇ ಸಂಪುಟದ ಮುಂದೆ ಮಂಡಿಸಲಾಗುವುದು ಎಂದು ಸೀತಾರಾಮನ್ ರಾಜ್ಯಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಹೇಳಿದರು.

ಡಿಜಿಟಲ್ ಕರೆನ್ಸಿಗಳ ಕುರಿತಾದ ಜಾಹೀರಾತುಗಳನ್ನು ನಿಲ್ಲಿಸುವ ಯಾವುದೇ ಯೋಜನೆ ಕೇಂದ್ರ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ ನಿರ್ಮಲಾ ಸೀತಾರಾಮನ್ ಅವರು, ಕ್ರಿಪ್ಟೋ ಕರೆನ್ಸಿಗಳ ನಿಯಂತ್ರಕ ಸಾಮರ್ಥ್ಯದ ಕುರಿತು ವ್ಯಾಪಕ ಚರ್ಚೆಗಳು ನಡೆದಿವೆ. ಆದರೆ ಹೊಸ ಕರಡು ಮಸೂದೆ ಈ ಕುರಿತಾದ ಗೊಂದಲಗಳನ್ನು ನಿವಾರಿಸಲಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com