ಮಕ್ಕಳನ್ನು ತಂಬಾಕು ಉತ್ಪನ್ನಗಳಿಂದ ದೂರವಿಡಲು ಸರ್ಕಾರಕ್ಕೆ ಸಿಎಂಪ್‌ಟಿಎಫ್‌ಕೆ ಪತ್ರ; ಸಲಹೆಯ ಅಂಶ ಹೀಗಿದೆ..

ಯುವಜನತೆ ತಂಬಾಕು ಉತ್ಪನ್ನಗಳ ಸೇವನೆಯ ಚಟಕ್ಕೆ ಒಳಪಡುವುದನ್ನು ತಪ್ಪಿಸಲು ಈ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಬೇಕು ಎಂದು ತಂಬಾಕು ನಿಯಂತ್ರಣಕ್ಕೆ ಶ್ರಮಿಸುತ್ತಿರುವ ನಗರದ ಸಂಸ್ಥೆಗಳು ಜಿಎಸ್ ಟಿ ಮಂಡಳಿಯನ್ನು ಒತ್ತಾಯಿಸಿವೆ.
ತಂಬಾಕು ಉತ್ಪನ್ನ (ಸಂಗ್ರಹ ಚಿತ್ರ)
ತಂಬಾಕು ಉತ್ಪನ್ನ (ಸಂಗ್ರಹ ಚಿತ್ರ)
Updated on

ಬೆಂಗಳೂರು: ಮಕ್ಕಳು ಹಾಗೂ ಯುವಜನರು ತಂಬಾಕು ಉತ್ಪನ್ನಗಳ ಸೇವನೆಯ ಚಟಕ್ಕೆ ಒಳಪಡುವುದನ್ನು ತಪ್ಪಿಸಲು ಈ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಬೇಕು ಎಂದು ತಂಬಾಕು ನಿಯಂತ್ರಣಕ್ಕೆ ಶ್ರಮಿಸುತ್ತಿರುವ ನಗರದ ಸಂಸ್ಥೆಗಳು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮಂಡಳಿಯನ್ನು ಒತ್ತಾಯಿಸಿವೆ. 

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್‌.ಎನ್. ಪ್ರಸಾದ್ ಅವರಿಗೆ ಪತ್ರ ಬರೆದಿರುವ   ಕನ್ಸೋರ್ಟಿಯಂ ಫಾರ್ ಟೊಬ್ಯಾಕೊ ಫ್ರೀ ಕರ್ನಾಟಕ (ಸಿಎಫ್‌ಟಿಎಫ್‌ಕೆ) ನೇತೃತ್ವದಲ್ಲಿ ವಿವಿಧ ಸಂಸ್ಥೆಗಳ ಪ್ರತಿನಿಧಿಗಳು ಜಿಎಸ್‌ಟಿ ಮಂಡಳಿಯ ಸಭೆಯಲ್ಲಿ ಪ್ರಸ್ತಾಪಿಸುವಂತೆ ಒತ್ತಾಯಿಸಿದ್ದಾರೆ.

ತೆರಿಗೆ ಹೆಚ್ಚಳದಿಂದ ತಂಬಾಕು ಉತ್ಪನ್ನಗಳ ಸೇವನೆಯನ್ನು ತಗ್ಗಿಸಬಹುದು. ಮಕ್ಕಳನ್ನು ತಂಬಾಕು ಉತ್ಪನ್ನಗಳಿಂದ ದೂರವಿಡುವಲ್ಲಿ ಇದು ನೆರವಾಗಲಿದೆ. ತಂಬಾಕು ಸೇವನೆಯ ಜಾಗತಿಕ ಸಮೀಕ್ಷೆ (ಜಿವೈಟಿಎಸ್) ಪ್ರಕಾರ ಅನೇಕ ಮಕ್ಕಳು 10 ವರ್ಷ ತಲುಪುವ ಮೊದಲೇ. ಈ ಪೈಕಿ  ಶೇ 38ರಷ್ಟು ಮಕ್ಕಳು ಸಿಗರೇಟು, ಶೇ 47ರಷ್ಟು ಮಕ್ಕಳು ಬೀಡಿ ಹಾಗೂ ಶೇ 52ರಷ್ಟು ಮಕ್ಕಳು ಹೊಗೆರಹಿತ ತಂಬಾಕು ಸೇವನೆಯ ಚಟಕ್ಕೆ ಒಳಪಟ್ಟಿರುವುದು ತಿಳಿದುಬಂದಿದೆ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್ ಪೀಡಿತರಾದವರ ಸಂಖ್ಯೆ ಹೆಚ್ಚುತ್ತಿದೆ. ಸಮಾಜದ ಪ್ರತಿ ಮೂವರಲ್ಲಿ ಒಬ್ಬರು ಯಾವುದಾದರೊಂದು ರೂಪದಲ್ಲಿ ತಂಬಾಕು ಉತ್ಪನ್ನ ಬಳಸುತ್ತಾರೆ. ಅವರು ಸಾಂಕ್ರಾಮಿಕವಲ್ಲದ ರೋಗಕ್ಕೆ ಒಳಪಡುತ್ತಿದ್ದಾರೆ ಎಂದು ಕ್ಯಾನ್ಸರ್ ತಜ್ಞ ಮತ್ತು ರಾಜ್ಯ ಸರ್ಕಾರದ ತಂಬಾಕು ನಿಯಂತ್ರಣಕ್ಕೆ ಸಂಬಂಧಿಸಿದ ಉನ್ನತ ಮಟ್ಟದ ಸಮಿತಿಯ ಸದಸ್ಯ ಡಾ. ವಿಶಾಲ್ ರಾವ್ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com