ಸಣ್ಣ ಉಳಿತಾಯಗಳ ಮೇಲಿನ ಬಡ್ಡಿ ದರ ಕಡಿತ: ಆದೇಶ ಹಿಂಪಡೆದ ಕೇಂದ್ರ ಸರ್ಕಾರ

ಸಣ್ಣ ಉಳಿತಾಯಗಳ ಮೇಲಿನ ಬಡ್ಡಿದರ ಕಡಿತ ಆದೇಶವನ್ನು ಕೇಂದ್ರ ಸರ್ಕಾರ ಹಿಂತೆಗೆದುಕೊಂಡಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Published: 01st April 2021 09:13 AM  |   Last Updated: 01st April 2021 12:22 PM   |  A+A-


Nirmala Sitharaman

ನಿರ್ಮಲಾ ಸೀತಾರಾಮನ್

Posted By : Sumana Upadhyaya
Source : PTI

ನವದೆಹಲಿ: ಸಣ್ಣ ಉಳಿತಾಯಗಳ ಮೇಲಿನ ಬಡ್ಡಿದರ ಕಡಿತ ಆದೇಶವನ್ನು ಕೇಂದ್ರ ಸರ್ಕಾರ ಹಿಂತೆಗೆದುಕೊಂಡಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಸಣ್ಣ ಉಳಿತಾಯ ಯೋಜನೆಗಳ ಮೇಲೆ ಬಡ್ಡಿದರ ಕಡಿತ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ನಿನ್ನೆ ಪ್ರಕಟಿಸಿತ್ತು. ಬ್ಯಾಂಕ್ ಗಳಲ್ಲಿ ನಿಶ್ಚಿತ ಠೇವಣಿಗಳ ಮೇಲಿನ ಬಡ್ಡಿದರ ಕಡಿತದಂತೆಯೇ 2021-22ನೇ ಆರ್ಥಿಕ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಎನ್ ಎಸ್ ಸಿ ಮತ್ತು ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯಗಳ ಮೇಲೆ ಬಡ್ಡಿದರವನ್ನು ಶೇಕಡಾ 1.1ರಷ್ಟು ಕಡಿತ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು.

ಪಿಪಿಎಫ್ ಮೇಲಿನ ಬಡ್ಡಿದರವನ್ನು ಕೇಂದ್ರ ಸರ್ಕಾರ ಶೇಕಡಾ 0.7ರಿಂದ 6.4ರವರೆಗೆ ಎನ್ ಎಸ್ ಸಿಯ ಬಡ್ಡಿದರವನ್ನು ಶೇಕಡಾ 0.9ರಿಂದ ಶೇಕಡಾ 5.9ರವರೆಗೆ ಕಡಿತ ಮಾಡಲಾಗಿತ್ತು.

ಆದರೆ ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿ, ಇಂದಿನಿಂದ ಆರಂಭವಾಗುವ 2021-22ನೇ ಹಣಕಾಸು ವರ್ಷದ ಮೊದಲ ತ್ರೈಮಾಸಿಕಕ್ಕಾಗಿ ವಿವಿಧ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರಗಳನ್ನು ಇಳಿಕೆ ಮಾಡಿ ಹೊರಡಿಸಿದ್ದ ಆದೇಶವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. 2021ರ ಮಾರ್ಚ್ ಮುನ್ನಕ್ಕೂ ಇದ್ದ ಬಡ್ಡಿ ದರ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ. ಬಡ್ಡಿ ದರ ಇಳಿಕೆ ಮಾಡಿದ್ದ ಆದೇಶ ಪ್ರಮಾದದಿಂದಾಗಿದ್ದು, ಅದನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ. 

Stay up to date on all the latest ವಾಣಿಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp