ಡಿಜಿಟಲ್ ಪಾವತಿ ವಿಧಾನ ಇ-ರುಪಿಗೆ ಪ್ರಧಾನಿ ನರೇಂದ್ರ ಮೋದಿ ನಾಳೆ ಚಾಲನೆ 

ವ್ಯಕ್ತಿ ಮತ್ತು ನಿರ್ದಿಷ್ಟ ಉದ್ದೇಶದ ಡಿಜಿಟಲ್ ಪಾವತಿ ಪರಿಹಾರ ಇ-ರುಪಿಗೆ  ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ, ವಿಡಿಯೊ ಕಾನ್ಫರೆನ್ಸ್ ಮೂಲಕ  ಚಾಲನೆ ನೀಡಲಿದ್ದಾರೆ.
ಪಿಎಂ ನರೇಂದ್ರ ಮೋದಿ
ಪಿಎಂ ನರೇಂದ್ರ ಮೋದಿ

ನವದೆಹಲಿ: ವ್ಯಕ್ತಿ ಮತ್ತು ನಿರ್ದಿಷ್ಟ ಉದ್ದೇಶದ ಡಿಜಿಟಲ್ ಪಾವತಿ ಪರಿಹಾರ ಇ-ರುಪಿಗೆ  ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ, ವಿಡಿಯೊ ಕಾನ್ಫರೆನ್ಸ್ ಮೂಲಕ  ಚಾಲನೆ ನೀಡಲಿದ್ದಾರೆ.

ಡಿಜಿಟಲ್ ಅಭಿಯಾನಗಳಿಗೆ ಆರಂಭದಿಂದಲೂ ಪ್ರೋತ್ಸಾಹ ನೀಡುತ್ತಾ ಬಂದಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ನಿರ್ದಿಷ್ಟ ಫಲಾನುಭವಿಗಳಿಗೆ ಇದರ ಲಾಭ ತಲುಪಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಲು, ಸರ್ಕಾರದ ಯೋಜನೆಗಳು ಫಲಾನುಭವಿಗಳಿಗೆ ಸರಿಯಾಗಿ ಪೂರ್ಣ ಪ್ರಮಾಣದಲ್ಲಿ ತಲುಪಲು ಡಿಜಿಟಲ್ ಪಾವತಿ ಸೂಕ್ತ ಕ್ರಮ ಎಂದು ಹೇಳುತ್ತಾ ಬಂದಿದೆ.

ಉತ್ತಮ ಆಡಳಿತದ ದೃಷ್ಟಿಕೋನವನ್ನು ಮುಂದುವರಿಸಿಕೊಂಡು ಹೋಗಲು ಎಲೆಕ್ಟ್ರಾನಿಕ್ ವೋಚರ್ ಪರಿಕಲ್ಪನೆ ಮುಖ್ಯವಾಗುತ್ತದೆ. ಇ-ರುಪಿ ನಗದುರಹಿತ ಮತ್ತು ಸಂಪರ್ಕರಹಿತ ಡಿಜಿಟಲ್ ಪಾವತಿ ವಿಧಾನವಾಗಿದೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ತಿಳಿಸಿದೆ.

ಹೇಗೆ ಕೆಲಸ ಮಾಡುತ್ತದೆ?:ಕ್ಯು ಆರ್ ಕೋಡ್ ಅಥವಾ ಎಸ್ ಎಂಎಸ್ ಗೆರೆಯಾಧಾರಿತ ಇ-ವೋಚರ್ ಫಲಾನುಭವಿಗಳ ಮೊಬೈಲ್ ಗೆ ಬರುತ್ತದೆ. ಈ ತಡೆರಹಿತ ಏಕ ಕಾಲದ ಪಾವತಿ ಕಾರ್ಯವಿಧಾನದ ಬಳಕೆದಾರರ ಕಾರ್ಡ್, ಡಿಜಿಟಲ್ ಪಾವತಿ ಅಪ್ಲಿಕೇಶನ್ ಅಥವಾ ಇಂಟರ್ನೆಟ್ ಬ್ಯಾಂಕಿಂಗ್ ಇಲ್ಲದೆ ವೋಚರ್ ಅನ್ನು ರಿಡೀಮ್ ಮಾಡಲು ಸೇವೆ ಒದಗಿಸುವವರಲ್ಲಿ ಸಾಧ್ಯವಾಗುತ್ತದೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಹೇಳಿದೆ.

ಹಣಕಾಸು ಸೇವೆಗಳ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಸಹಯೋಗದೊಂದಿಗೆ ಇದನ್ನು ಭಾರತೀಯ ರಾಷ್ಟ್ರೀಯ ಪಾವತಿ ನಿಗಮವು ತನ್ನ ಯುಪಿಐ ವೇದಿಕೆಯಲ್ಲಿ ಅಭಿವೃದ್ಧಿಪಡಿಸಿದೆ.

ಯಾವುದೇ ಭೌತಿಕ ಸಂಪರ್ಕವಿಲ್ಲದೆ ಡಿಜಿಟಲ್ ರೀತಿಯಲ್ಲಿ ಫಲಾನುಭವಿಗಳು ಮತ್ತು ಸೇವಾ ಪೂರೈಕೆದಾರರೊಂದಿಗೆ ಇ-ರುಪಿ ಸೇವೆಗಳ ಪ್ರಾಯೋಜಕರನ್ನು ಸಂಪರ್ಕಿಸುತ್ತದೆ. ವಹಿವಾಟು ಪೂರ್ಣಗೊಂಡ ನಂತರವೇ ಸೇವಾ ಪೂರೈಕೆದಾರರಿಗೆ ಪಾವತಿಯನ್ನು ಮಾಡಲಾಗಿದೆಯೆಂದು ಇದು ಖಚಿತಪಡಿಸುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com