ಕೊಂಚ ತಗ್ಗಿದ ಪೆಟ್ರೋಲ್, ಡೀಸೆಲ್ ಬೆಲೆ: ಇಲ್ಲಿದೆ ಸಂಪೂರ್ಣ ದರ ಪಟ್ಟಿ

ಸಾರ್ವಜನಿಕ ತೈಲ ಕಂಪನಿಗಳು ಭಾನುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕೊಂಚಮಟ್ಟಿಗೆ ತಗ್ಗಿಸಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸಾರ್ವಜನಿಕ ತೈಲ ಕಂಪನಿಗಳು ಭಾನುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕೊಂಚಮಟ್ಟಿಗೆ ತಗ್ಗಿಸಿವೆ.

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರವಾಗಿ ಹೆಚ್ಚುತ್ತಿರುವುದು ಜನಸಾಮಾನ್ಯರಲ್ಲಿ ಆತಂಕ ತಂದಿದೆ. ಹಲವು ನಗರಗಳಲ್ಲಿ ಪೆಟ್ರೋಲ್ ಬೆಲೆ ನೂರರ ಗಡಿ ದಾಟಿದ್ದು, ಮಧ್ಯಮ ವರ್ಗದ ಜನರ ಜೇಬು ನಿತ್ಯವೂ ಸುಡುತ್ತಿದೆ.

ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 15 ರಿಂದ 20 ಪೈಸೆಗಳಷ್ಟು ಹಾಗೂ ಡೀಸೆಲ್ ದರಗಳು 18 ರಿಂದ 20 ಪೈಸೆಗಳಷ್ಟು ಕಡಿಮೆಯಾಗಿದೆ. 

ಒಂದು ತಿಂಗಳಿಗೂ ಹೆಚ್ಚು ಕಾಲ ಸ್ಥಿರವಾಗಿ ಉಳಿದಿದ್ದ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 20 ಪೈಸೆ ಗಳಷ್ಟು ತಗ್ಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 105.19ರಷ್ಟಿದ್ದರೆ, ಪ್ರತೀ ಲೀಟರ್ ಡೀಸೆಲ್ ದರ 94.55 ರೂ ರಷ್ಟಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 101.7ರಷ್ಟಿದ್ದು, ಪ್ರತೀ ಲೀಟರ್ ಡೀಸೆಲ್ ದರ ರೂ.89.13ರಷ್ಟಿದೆ. 

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 107.72 ಪ್ರತೀ ಲೀಟರ್ ಡೀಸೆಲ್ ದರ 96.69 ರೂ, ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 101.99, ಪ್ರತೀ ಲೀಟರ್ ಡೀಸೆಲ್ ದರ 92.19 ರೂ,  ಚೆನ್ನೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 99.37, ಪ್ರತೀ ಲೀಟರ್ ಡೀಸೆಲ್ ದರ 93.71 ರೂ ರಷ್ಟಿದೆ ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com