ಕೇಂದ್ರ  ಬಜೆಟ್ 2021 ಮಂಡನೆ ಬೆನ್ನಲ್ಲೇ 1800 ಅಂಕ ಏರಿಕೆ ಕಂಡ ಸೆನ್ಸೆಕ್ಸ್, 14 ಸಾವಿರ ಗಡಿ ದಾಟಿದ ನಿಫ್ಟಿ

ಕೇಂದ್ರ ಬಜೆಟ್ 2021ರ ಆರಂಭಕ್ಕೂ ಮುನ್ನ ಕುಸಿತ ಕಂಡಿದ್ದ ಭಾರತೀಯ ಷೇರುಮಾರುಕಟ್ಟೆ ಇದೀಗ ಮತ್ತೆ ಚೇತರಿಕೆ ಕಂಡಿದ್ದು, ಸೆನ್ಸೆಕ್ಸ್ ಬರೊಬ್ಬರಿ 1800ಕ್ಕೂ ಅಧಿಕ ಅಂಕಗಳ ಏರಿಕೆ ಕಂಡಿದೆ.

Published: 01st February 2021 01:40 PM  |   Last Updated: 01st February 2021 02:08 PM   |  A+A-


Sensex up 1,921 points

ಸಂಗ್ರಹ ಚಿತ್ರ

Posted By : Srinivasamurthy VN
Source : Online Desk

ಮುಂಬೈ: ಕೇಂದ್ರ ಬಜೆಟ್ 2021ರ ಆರಂಭಕ್ಕೂ ಮುನ್ನ ಕುಸಿತ ಕಂಡಿದ್ದ ಭಾರತೀಯ ಷೇರುಮಾರುಕಟ್ಟೆ ಇದೀಗ ಮತ್ತೆ ಚೇತರಿಕೆ ಕಂಡಿದ್ದು, ಸೆನ್ಸೆಕ್ಸ್ ಬರೊಬ್ಬರಿ 1800ಕ್ಕೂ ಅಧಿಕ ಅಂಕಗಳ ಏರಿಕೆ ಕಂಡಿದೆ.

ಕೇಂದ್ರ ಬಜೆಟ್ ಮುಕ್ತಾಯದ ಬೆನ್ನಲ್ಲೇ ಭಾರತೀಯ ಷೇರುಮಾರುಕಟ್ಟೆ ಚೇತರಿಸಿಕೊಂಡಿದ್ದು, ಸೆನ್ಸೆಕ್ಸ್ ಬರೊಬ್ಬರಿ 1800 ಕ್ಕೂ ಅಧಿಕ ಅಂಕಗಳ ಏರಿಕೆ ಕಂಡಿದೆ. ಆ ಮೂಲಕ ಸೆನ್ಸೆಕ್ಸ್ 48,118.70ಕ್ಕೆ ಏರಿಕೆಯಾಗಿದೆ. ಅಂತೆಯೇ ನಿಫ್ಚಿ ಕೂಡ 500ಕ್ಕೂ ಹೆಚ್ಚು ಅಂಕಗಳ ಏರಿಕೆ ಕಾಣುವ ಮೂಲಕ 14,150.75ಕ್ಕೆ ಏರಿಕೆಯಾಗಿದೆ. 

ಬಜೆಟ್ ಮಂಡನೆ ಬೆನ್ನಲ್ಲೇ ಷೇರುಮಾರುಕಟ್ಟೆಯಲ್ಲಿ ಹೂಡಿಕೆದಾರರ ಉತ್ಸಾಹ ಇಮ್ಮಡಿಯಾಗಿದ್ದು, ಭಾರತೀಯ ಷೇರುಗಳಿಗೆ ಬೇಡಿಕೆ ಹೆಚ್ಚಾಗಿದೆ. ಉಳಿದಂತೆ ಸಣ್ಣ ಮತ್ತು ಮಧ್ಯಮ ಪ್ರಮಾಣದ ಹೂಡಿಕೆದಾರರೂ ಕೂಡ ಭಾರತೀಯ ಷೇರುಗಳ ಖರೀದಿಗೆ ಮುಂದಾಗಿದ್ದು, ಮಾರುಕಟ್ಟೆಯಲ್ಲಿ ಚೇತೋಹಾರಿ ಬೆಳವಣಿಗೆ ಕಂಡುಬಂದಿದೆ. ಪರಿಣಾಮ ಭಾರತೀಯ ಷೇರುಗಳ ಮೌಲ್ಯ ಹೆಚ್ಚಾಗಿದ್ದು, ಪ್ರಮುಖವಾಗಿ ಎಫ್ ಎಂಸಿಜಿ ಮತ್ತು ಮೆಟಲ್ ಕ್ಷೇತ್ರದ ಷೇರುಗಳ ಮೌಲ್ಯ ಹೆಚ್ಚಾಗಿದೆ. ಐಸಿಐಸಿಐ ಬ್ಯಾಂಕ್, ಎಚ್‌ಡಿಎಫ್‌ಸಿ, ಎಚ್‌ಡಿಎಫ್‌ಸಿ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಆಕ್ಸಿಸ್ ಬ್ಯಾಂಕ್ ಗಳ ಷೇರುಗಳ ಮೌಲ್ಯದಲ್ಲಿ ಏರಿಕೆ ಕಂಡುಬಂದಿದೆ.

ಇಂಡಿಯಾಬುಲ್ಸ್ ರಿಯಲ್ ಎಸ್ಟೇಟ್ ಷೇರುಗಳ ಮೌಲ್ಯ ಶೇ.4.5ರಷ್ಟು ಹೆಚ್ಚಾಗಿದ್ದು, ಪ್ರೆಸ್ಟೀಜ್ ಎಸ್ಟೇಟ್ ನ ಷೇರುಗಳ ಮೌಲ್ಯದಲ್ಲಿ ಶೇ. 4.25,  ಫೀನಿಕ್ಸ್ ಮಿಲ್ಸ್ ಶೇ.4, ಬ್ರಿಗೇಡ್ ಎಂಟರ್‌ಪ್ರೈಸಸ್ ಶೇ.1.888 ಮತ್ತು  ಡಿಎಲ್ಎಫ್ ನ ಷೇರುಗಳ ಮೌಲ್ಯದಲ್ಲಿ ಶೇ.1.61ರಷ್ಟು ಹೆಚ್ಚಳ ಕಂಡುಬಂದಿದೆ. 


Stay up to date on all the latest ವಾಣಿಜ್ಯ news
Poll
kangana ranaut

ಗುಲಾಮರು ಇಟ್ಟಿರುವ 'ಇಂಡಿಯಾ' ಹೆಸರನ್ನು 'ಭಾರತ್' ಎಂದು ಬದಲಾಯಿಸುವಂತೆ ಕಂಗನಾ ರಣಾವತ್ ಹೇಳಿದ್ದಾರೆ. ನೀವು ಏನಂತೀರಿ?


Result
ಹೌದು, ಅವರು ಹೇಳಿದ್ದು ಸರಿ.
ಇಲ್ಲ, ಇದು ತುಂಬಾ ಸಿಲ್ಲಿ.
flipboard facebook twitter whatsapp