ಸೆನ್ಸೆಕ್ಸ್, ನಿಫ್ಟಿ ಹೊಸ ಎತ್ತರದಲ್ಲಿ ದಿನದ ವಹಿವಾಟು ಅಂತ್ಯ
ಮುಂಬೈ ಷೇರು ವಿನಿಮಯ ಕೇಂದ್ರ(ಬಿಎಸ್ಇ) ಮತ್ತು ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ(ಎನ್ಎಸ್ಇ)ಗಳ ಸಂವೇದಿ ಸೂಚ್ಯಂಕಗಳು ಸತತ ಮೂರನೇ ವಹಿವಾಟು ದಿನವಾದ ಮಂಗಳವಾರವೂ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿ ದಿನದ ವಹಿವಾಟು ಅಂತ್ಯಗೊಳಿಸಿವೆ.
Published: 12th January 2021 05:36 PM | Last Updated: 12th January 2021 05:36 PM | A+A A-

ಸಾಂದರ್ಭಿಕ ಚಿತ್ರ
ಮುಂಬೈ: ಮುಂಬೈ ಷೇರು ವಿನಿಮಯ ಕೇಂದ್ರ(ಬಿಎಸ್ಇ) ಮತ್ತು ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ(ಎನ್ಎಸ್ಇ)ಗಳ ಸಂವೇದಿ ಸೂಚ್ಯಂಕಗಳು ಸತತ ಮೂರನೇ ವಹಿವಾಟು ದಿನವಾದ ಮಂಗಳವಾರವೂ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿ ದಿನದ ವಹಿವಾಟು ಅಂತ್ಯಗೊಳಿಸಿವೆ.
ಸೆನ್ಸೆಕ್ಸ್ 248 ಅಂಕ ಏರಿಕೆ ಕಂಡು ದಾಖಲೆಯ ಗರಿಷ್ಠ 49,517 ಕ್ಕೆ ತಲುಪಿದ್ದರೆ, ನಿಫ್ಟಿ 79 ಅಂಕ ಏರಿಕೆ ಕಂಡು 14,563 ಕ್ಕೆ ತಲುಪಿದೆ.
ಆರಂಭಿಕ ವಹಿವಾಟಿನಲ್ಲಿ ಸೂಚ್ಯಂಕಗಳು ಇಳಿಕೆ ಕಂಡರೂ ನಂತರ ಬ್ಯಾಂಕಿಂಗ್ ಷೇರುಗಳ ಖರೀದಿ ಬೇಡಿಕೆ ಹೆಚ್ಚಾದ್ದರಿಂದ ಏರಿಕೆ ಕಂಡಿವೆ.
ಟಾಟಾ ಮೋಟಾರ್ಸ್, ಐಷರ್ ಮೋಟಾರ್ಸ್, ಎಚ್ಡಿಎಫ್ಸಿ ಬ್ಯಾಂಕ್, ಭಾರ್ತಿ ಏರ್ಟೆಲ್, ಗೇಲ್, ಐಟಿಸಿ, ಎಸ್ಬಿಐ ಮತ್ತು ಕೋಲ್ ಇಂಡಿಯಾ ಹೆಚ್ಚು ಲಾಭ ಗಳಿಸಿದ ಷೇರುಗಳಾಗಿವೆ.
ನಷ್ಟ ಕಂಡ ಪ್ರಮುಖ ಷೇರುಗಳಲ್ಲಿ ಟೈಟಾನ್, ಏಷ್ಯನ್ ಪೇಂಟ್ಸ್, ನೆಸ್ಲೆ ಮತ್ತು ಸನ್ ಫಾರ್ಮಾ ಸೇರಿವೆ.