ದೇಶಾದ್ಯಂತ ಪೆಟ್ರೋಲ್ ಬೆಲೆ 36 ಪೈಸೆ ಏರಿಕೆ:  ಹಲವೆಡೆ 100 ರೂ. ದಾಟಿದ ಲೀಟರ್ ದರ

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಸೋಮವಾರ ಮತ್ತೆ ಪೆಟ್ರೋಲ್ ದರವನ್ನು 36 ಪೈಸೆ ಏರಿಕೆ ಮಾಡಿವೆ. ಈ ಮೂಲಕ 2 ತಿಂಗಳಲ್ಲಿ ಪೆಟ್ರೋಲ್ ಬೆಲೆ 35 ಬಾರಿ ಏರಿಕೆ ಮಾಡಿದಂತಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಸೋಮವಾರ ಮತ್ತೆ ಪೆಟ್ರೋಲ್ ದರವನ್ನು 36 ಪೈಸೆ ಏರಿಕೆ ಮಾಡಿವೆ. ಈ ಮೂಲಕ 2 ತಿಂಗಳಲ್ಲಿ ಪೆಟ್ರೋಲ್ ಬೆಲೆ 35 ಬಾರಿ ಏರಿಕೆ ಮಾಡಿದಂತಾಗಿದೆ. 

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮೂಲಗಳ ಪ್ರಕಾರ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 36 ಪೈಸೆ ಏರಿಕೆಯಾಗಿದ್ದರೆ, ಡೀಸೆಲ್ ದರವನ್ನು ಯಥಾಸ್ಥಿತಿ ಕಾಯ್ದುಕೊಂಡಿವೆ ಎಂದು ತಿಳಿದುಬಂದಿದೆ.

ಹೊಸ ದರದೊಂದಿಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್'ಗೆ ರೂ.99.92ಗೆ ಏರಿಕೆಯಾಗಿದ್ದರೆ, ಬೆಂಗಳೂರಿನಲ್ಲಿ ರೂ.103.26ಕ್ಕೆ ತಲುಪಿದೆ. 

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 105.97ಕ್ಕೆ ಏರಿಕೆಯಾಗಿದ್ದು, ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 99.9ಕ್ಕೆ ಏರಿಕೆಯಾಗಿದೆ. ಇನ್ನು ಚೆನ್ನೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 100.8ಕ್ಕೆ ತಲುಪಿದೆ.

ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಜಮ್ಮುಕಾಶ್ಮೀರ, ಒಡಿಶಾ, ತಮಿಳುನಾಡು, ಕೇರಳ, ಬಿಹಾರ, ಪಂಜಾಬ್, ಲಡಾಖ್ ಬಳಿಕ ಇದೀಗ ಸಿಕ್ಕಿಂನಲ್ಲೂ ಪೆಟ್ರೋಲ್ ಬೆಲೆ ರೂ.100ರ ಗಡಿ ದಾಟಿದೆ. 

ಇನ್ನು ದೇಶದಲ್ಲೇ ಅತೀ ಹೆಚ್ಚು ತೈಲ ದರ ಇರುವ ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ ರೂ.111.15ಗೆ ತಲುಪಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com