ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಪೆಟ್ರೋಲ್ 35 ಪೈಸೆ, ಡೀಸೆಲ್ 17 ಪೈಸೆ ಏರಿಕೆ

ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮಂಗಳವಾರ ಮತ್ತೆ ಪೆಟ್ರೋಲ್, ಡೀಸೆಲ್ ದರವನ್ನು ಏರಿಕೆ ಮಾಡಿವೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮಂಗಳವಾರ ಮತ್ತೆ ಪೆಟ್ರೋಲ್, ಡೀಸೆಲ್ ದರವನ್ನು ಏರಿಕೆ ಮಾಡಿವೆ. 

ಮೆಟ್ರೋ ನಗರಗಳ ಪೈಕಿ ದೆಹಲಿ ಹಾಗೂ ಕೋಲ್ಕತಾ ಲೇಟೆಸ್ಟ್ ಆಗಿ ಪೆಟ್ರೋಲ್ 100 ರು ಪ್ರತಿ ಲೀಟರ್ ಕ್ಲಬ್ಬಿಗೆ ಎಂಟ್ರಿ ಕೊಟ್ಟಿವೆ.

ಮೇ 4ರಿಂದ ಇಂದಿನ ತನಕ ಒಟ್ಟು 36 ಬಾರಿ ಹಾಗೂ ಜೂನ್ ತಿಂಗಳಲ್ಲೇ 18 ಬಾರಿ ಬೆಲೆ ಏರಿಕೆ ಮಾಡಲಾಗಿದೆ. ಜುಲೈ 6ರಂದು ಇಂಧನ ದರದಲ್ಲಿ ಯಾವುದೇ ಬದಲಾವಣೆಯಾಗಿರಲಿಲ್ಲ. ಜುಲೈ 07ರಂದು ಪೆಟ್ರೋಲ್ ಬೆಲೆ ಸರಾಸರಿ 35 ಪೈಸೆ ಪ್ರತಿ ಲೀಟರ್ ಏರಿಕೆ, ಡೀಸೆಲ್ ಬೆಲೆ 17 ಪೈಸೆ ಪ್ರತಿ ಲೀಟರ್ ನಂತೆ ಏರಿಕೆಯಾಗಿದೆ.

ದೆಹಲಿಯಲ್ಲಿ ಬುಧವಾರದಂದು ಪೆಟ್ರೋಲ್ ಪ್ರತಿ ಲೀಟರ್‌ಗೆ ರೂ.100.27 ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ ರೂ.89.59ಗೆ ತಲುಪಿದೆ. 

ಕರ್ನಾಟಕ ಸೇರಿದಂತೆ 14ಕ್ಕೂ ಅಧಿಕ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ಗಗನಕ್ಕೇರಿದೆ. ಸಿಕ್ಕಿಂ ರಾಜ್ಯ ಈ ಪಟ್ಟಿಗೆ ಹೊಸದಾಗಿ ಸೇರ್ಪಡೆಗೊಂಡಿದೆ.

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ ರೂ.106.31 ಪ್ರತಿ ಲೀಟರ್, ಡೀಸೆಲ್ ರೂ.97.15 ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. 

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 103.62ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ 94.95 ರೂ ಗೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 100.27 ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ 89.59 ರೂ ಗೆ ಏರಿಕೆಯಾಗಿದೆ.

ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 100.29ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 92.56 ರೂ ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ  ಪ್ರತಿ ಲೀಟರ್ ಪೆಟ್ರೋಲ್ ದರ 101.11ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ 94.12 ರೂ ಗೆ ಏರಿಕೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com