ದಿನನಿತ್ಯ ಏರುತ್ತಲೇ ಇದೆ ತೈಲ ಬೆಲೆ; ದೆಹಲಿ, ಮುಂಬೈ, ಬೆಂಗಳೂರಿನಲ್ಲಿ ಇಂದಿನ ಬೆಲೆ ವಿವರ ಇಲ್ಲಿದೆ!

ಭಾರತದಲ್ಲಿ ಒಂದೆಡೆ ಕೊರೋನಾ ವೈರಸ್ ಅಬ್ಬರವಾದರೆ ಮತ್ತೊಂದೆಡೆ ಬೆಲೆಯೇರಿಕೆಯಿಂದ ಜನರು ತತ್ತರಿಸಿ ಹೋಗುತ್ತಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯ ಏರಿಕೆಯಿಂದ ಜನರು ತಮ್ಮ ವಾಹನಗಳನ್ನು ರಸ್ತೆಗಿಳಿಸಲು ಯೋಚಿಸುವ ಪರಿಸ್ಥಿತಿ ಎದುರಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತದಲ್ಲಿ ಒಂದೆಡೆ ಕೊರೋನಾ ವೈರಸ್ ಅಬ್ಬರವಾದರೆ ಮತ್ತೊಂದೆಡೆ ಬೆಲೆಯೇರಿಕೆಯಿಂದ ಜನರು ತತ್ತರಿಸಿ ಹೋಗುತ್ತಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯ ಏರಿಕೆಯಿಂದ ಜನರು ತಮ್ಮ ವಾಹನಗಳನ್ನು ರಸ್ತೆಗಿಳಿಸಲು ಯೋಚಿಸುವ ಪರಿಸ್ಥಿತಿ ಎದುರಾಗಿದೆ. 

ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಗುರುವಾರ ಮತ್ತೆ ಪೆಟ್ರೋಲ್, ಡೀಸೆಲ್ ದರವನ್ನು ಏರಿಕೆ ಮಾಡಿವೆ. 

ಮೇ 4ರಿಂದ ಇಂದಿನ ತನಕ ಒಟ್ಟು 37 ಬಾರಿ ಹಾಗೂ ಜೂನ್ ತಿಂಗಳಲ್ಲೇ 18 ಬಾರಿ ಬೆಲೆ ಏರಿಕೆ ಮಾಡಲಾಗಿದೆ. ಜುಲೈ 08 ರಂದು ಪೆಟ್ರೋಲ್ ಬೆಲೆ ಸರಾಸರಿ 37 ಪೈಸೆ ಪ್ರತಿ ಲೀಟರ್ ಏರಿಕೆ, ಡೀಸೆಲ್ ಬೆಲೆ 10 ಪೈಸೆ ಪ್ರತಿ ಲೀಟರ್ ನಂತೆ ಏರಿಕೆಯಾಗಿದೆ.

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ ರೂ.106.65 ಪ್ರತಿ ಲೀಟರ್, ಡೀಸೆಲ್ ರೂ.97.24 ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. 

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 103.99ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ 95.05 ರೂ ಗೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 100.62ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ 89.68  ರೂ ಗೆ ಏರಿಕೆಯಾಗಿದೆ.

ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 100.68ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 92.71 ರೂ ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ  ಪ್ರತಿ ಲೀಟರ್ ಪೆಟ್ರೋಲ್ ದರ 101.42ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ 94.2 ರೂ ಗೆ ಏರಿಕೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com