ಗ್ರಾಹಕರಿಗೆ ಬಿಗ್ ಶಾಕ್: ಕರ್ನಾಟಕದ ಹಲವು ಜಿಲ್ಲೆಗಳಲ್ಲೂ 100 ರೂ. ತಲುಪಿದ ಪೆಟ್ರೋಲ್ ದರ!

ಕರ್ನಾಟಕ ರಾಜ್ಯ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಸೋಮವಾರ (ಜೂನ್ 7ರಂದು) ಕೂಡ ಪೆಟ್ರೋಲ್ ದರ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿ ಕೊರೋನಾ ಸಂಕಷ್ಟ ಕಾಲದಲ್ಲಿ ಗ್ರಾಹಕರಿಗೆ ಬಿಗ್ ಶಾಕ್ ನೀಡಲಾಗಿದೆ. ಹಲವು ನಗರಗಳಲ್ಲಿ ಪೆಟ್ರೋಲ್ ದರ ಲೀಟರ್ ಗೆ 100 ರೂಪಾಯಿ ದಾಟಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು/ನವದೆಹಲಿ: ಕರ್ನಾಟಕ ರಾಜ್ಯ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಸೋಮವಾರ(ಜೂನ್ 7ರಂದು) ಕೂಡ ಪೆಟ್ರೋಲ್ ದರ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿ ಕೊರೋನಾ ಸಂಕಷ್ಟ ಕಾಲದಲ್ಲಿ ಗ್ರಾಹಕರಿಗೆ ಬಿಗ್ ಶಾಕ್ ನೀಡಲಾಗಿದೆ. ಹಲವು ನಗರಗಳಲ್ಲಿ ಪೆಟ್ರೋಲ್ ದರ ಲೀಟರ್ ಗೆ 100 ರೂಪಾಯಿ ದಾಟಿದೆ.

ಈ ಮೂಲಕ ಜೂನ್ ತಿಂಗಳ ಮೊದಲ ವಾರದಲ್ಲಿಯೇ ನಾಲ್ಕನೇ ಬಾರಿ ಇಂಧನ ಬೆಲೆ ಏರಿಕೆಯಾಗಿದೆ. ಕಳೆದ ಮೇ 4ರ ನಂತರ ಪೆಟ್ರೋಲ್ ಬೆಲೆ ಲೀಟರ್ ಗೆ 5 ರೂಪಾಯಿಗಳಷ್ಟು ಮತ್ತು ಡೀಸೆಲ್ ಬೆಲೆ ಲೀಟರ್ ಗೆ 6 ರೂಪಾಯಿಗಳಷ್ಟು ದೇಶಾದ್ಯಂತ ಏರಿಕೆಯಾಗಿದೆ.

ದೇಶದ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 95 ರೂಪಾಯಿ 31 ಪೈಸೆಗೆ ತಲುಪಿದೆ. ಡೀಸೆಲ್ ದರ ಲೀಟರ್ ಗೆ 86 ರೂಪಾಯಿ 22 ಪೈಸೆಯಷ್ಟಾಗಿದೆ.

ಅಂತಾರಾಷ್ಟ್ರೀಯ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಇಂಧನ ಬೆಲೆಯಲ್ಲಿ ವ್ಯತ್ಯಾಸವಾಗುತ್ತಿದ್ದಂತೆ ಭಾರತದಲ್ಲಿ ಕೇಂದ್ರ ಸರ್ಕಾರ ಸ್ವಾಮ್ಯದ ತೈಲ ಕಂಪೆನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಪರಿಷ್ಕರಿಸುತ್ತಿರುತ್ತವೆ.

ಕೋಲ್ಕತ್ತಾದಲ್ಲಿ ಪೆಟ್ರೋಲ್ ಗೆ 95 ರೂಪಾಯಿ 28 ಪೈಸೆ, ಡೀಸೆಲ್ ಬೆಲೆ ಲೀಟರ್ ಗೆ 89 ರೂಪಾಯಿ 07 ಪೈಸೆಯಷ್ಟಿದೆ. ಚೆನ್ನೈಯಲ್ಲಿ ಪೆಟ್ರೋಲ್ ಲೀಟರ್ ಗೆ 96 ರೂಪಾಯಿ 71 ಪೈಸೆಯಷ್ಟಿದ್ದರೆ, ಡೀಸೆಲ್ ಬೆಲೆ 90 ರೂಪಾಯಿ 92 ಪೈಸೆಯಷ್ಟಾಗಿದೆ.

ಮುಂಬೈಯಲ್ಲಿ ಪೆಟ್ರೋಲ್ ಬೆಲೆ 100 ರೂಪಾಯಿ ಗಡಿ ದಾಟಿ 101 ರೂಪಾಯಿ 52 ಪೈಸೆಯಷ್ಟಾಗಿದ್ದರೆ, ಡೀಸೆಲ್ ಬೆಲೆ 93 ರೂಪಾಯಿ 58 ಪೈಸೆಯಷ್ಟಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ 100 ರೂಗೆ ತಲುಪಿದ ಪೆಟ್ರೋಲ್ ದರ: ಇನ್ನು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕೂಡ ಪೆಟ್ರೋಲ್ ದರ ಲೀಟರ್ ಗೆ 100 ರೂಪಾಯಿಗೆ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಇಂದು ಪೆಟ್ರೋಲ್ ದರ 97 ರೂಪಾಯಿ 92 ಪೈಸೆಯಾಗಿದ್ದರೆ, ಡೀಸೆಲ್ ಬೆಲೆ 90 ರೂಪಾಯಿ 81 ಪೈಸೆಯಾಗಿದೆ.

ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳಲ್ಲಿ ಇಂದು ಪೆಟ್ರೋಲ್ ದರ ಲೀಟರ್ ಗೆ 100 ರೂಪಾಯಿಗೆ ಏರಿಕೆಯಾಗಿದೆ. ಡೀಸೆಲ್ ದರ 92 ರೂಪಾಯಿ 81 ಪೈಸೆಯಷ್ಟಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com