ಕೋವಿಡ್-19 ಔಷಧಿ, ಉಪಕರಣಗಳ ಮೇಲಿನ ತೆರಿಗೆ ಕಡಿತ: ಜಿಎಸ್‌ಟಿ ಸಭೆ ಬಳಿಕ ನಿರ್ಮಲಾ ಸೀತಾರಾಮನ್

ಶನಿವಾರ ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆಯು ಕೋವಿಡ್ -19 ಔಷಧಿಗಳಾದ ರೆಮ್‌ಡೆಸಿವಿರ್ ಮತ್ತು ಆಮ್ಲಜನಕ ಕಾನ್ಸಂಟ್ರೇಟರ್ ಗಳು ಮತ್ತು ವೈದ್ಯಕೀಯ ಆಮ್ಲಜನಕದಂತಹ ಸರಕುಗಳಿಗೆ ತೆರಿಗೆ ದರವನ್ನು ಕಡಿತಗೊಳಿಸಿದೆ,

Published: 12th June 2021 04:42 PM  |   Last Updated: 12th June 2021 04:52 PM   |  A+A-


ನಿರ್ಮಲಾ ಸೀತಾರಾಮನ್

Posted By : Raghavendra Adiga
Source : PTI

ನವದೆಹಲಿ: ಶನಿವಾರ ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆಯು ಕೋವಿಡ್ -19 ಔಷಧಿಗಳಾದ ರೆಮ್‌ಡೆಸಿವಿರ್ ಮತ್ತು ಆಮ್ಲಜನಕ ಕಾನ್ಸಂಟ್ರೇಟರ್ ಗಳು ಮತ್ತು ವೈದ್ಯಕೀಯ ಆಮ್ಲಜನಕದಂತಹ ಸರಕುಗಳಿಗೆ ತೆರಿಗೆ ದರವನ್ನು ಕಡಿತಗೊಳಿಸಿದೆ,

Tocilizumab  ಹಾಗೂ  Amphotericin B ಔಷಧಿಗಳ ಮೇಲೆ ಜಿಎಸ್‌ಟಿಯನ್ನು ಶೇಕಡಾ 5ಕ್ಕೆ ನಿಗದಿಪಡಿಸಿದರೆ ರೆಮ್‌ಡೆಸಿವಿರ್ ಮತ್ತು ಹೆಪಾರಿನ್‌ನಂತಹ ಆಂಟಿ ಕೋಗುಲಂಟ್‌ಗಳ ಮೇಲಿನ ತೆರಿಗೆಯನ್ನು ಶೇಕಡಾ 12 ರಿಂದ 5 ಕ್ಕೆ ಇಳಿಸಲಾಗಿದೆ

ವೈದ್ಯಕೀಯ ಆಮ್ಲಜನಕ, ಆಮ್ಲಜನಕ ಕಾನ್ಸಂಟ್ರೇಟರ್ ಗಳು, ವೆಂಟಿಲೇಟರ್‌ಗಳು, ಬೈಪಾಪ್ ಯಂತ್ರಗಳು ಮತ್ತು ಹೈ ಫ್ಲೋ ನಾಸಲ್ ಕ್ಯಾನುಲ್ಲಾ ಸಾಧನಗಳ ಮೇಲಿನ ತೆರಿಗೆಯನ್ನು ಶೇಕಡಾ 12 ರಿಂದ 5 ಕ್ಕೆ ಕಡಿತಗೊಳಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಅಲ್ಲದೆ, ಕೋವಿಡ್ ಪರೀಕ್ಷಾ ಕಿಟ್‌ಗಳ ಮೇಲಿನ ತೆರಿಗೆಯನ್ನು ಶೇಕಡಾ 12 ರಿಂದ ಶೇ 5 ಕ್ಕೆ ಇಳಿಸಲಾಗಿದೆ.

ಪಲ್ಸ್ ಆಕ್ಸಿಮೀಟರ್, ಹ್ಯಾಂಡ್ ಸ್ಯಾನಿಟೈಸರ್, ತಾಪಮಾನ ತಪಾಸಣೆ ಉಪಕರಣಗಳು ಮತ್ತು ಆಂಬುಲೆನ್ಸ್‌ಗಳ ಮೇಲೆ ಸಹ ತೆರಿಗೆಯನ್ನು ಶೇಕಡಾ 5 ರಷ್ಟು ಇಳಿಕೆ ಮಾಡಲಾಗಿದೆ ಎಂದು ಅವರು ಹೇಳಿದರು.


Stay up to date on all the latest ವಾಣಿಜ್ಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp