ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೂ.100 ಗಡಿ ದಾಟಿದ ಪೆಟ್ರೋಲ್ ದರ; ಇಲ್ಲಿದೆ ಹೊಸ ದರ ಪಟ್ಟಿ!

ರಾಜಧಾನಿಯಲ್ಲಿ ತೈಲ ದರ ಗಗನಕ್ಕೇರಿದ್ದು, ಲೀಟರ್ ಪೆಟ್ರೋಲ್ ಸಾರ್ವಕಾಲಿಕ ದಾಖಲೆ ಬರೆದಿದೆ. ಸಿಲಿಕಾನ್ ಸಿಟಿಯಲ್ಲಿ ಶುಕ್ರವಾರ ಪೆಟ್ರೋಲ್ ದರ ರೂ.100ರ ಗಡಿ ದಾಟಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜಧಾನಿಯಲ್ಲಿ ತೈಲ ದರ ಗಗನಕ್ಕೇರಿದ್ದು, ಲೀಟರ್ ಪೆಟ್ರೋಲ್ ಸಾರ್ವಕಾಲಿಕ ದಾಖಲೆ ಬರೆದಿದೆ. ಸಿಲಿಕಾನ್ ಸಿಟಿಯಲ್ಲಿ ಶುಕ್ರವಾರ ಪೆಟ್ರೋಲ್ ದರ ರೂ.100ರ ಗಡಿ ದಾಟಿದೆ

ಗುರುವಾರ ಸರ್ಕಾರಿ ಬಂಕ್ ಗಳಲ್ಲಿ ಲೀಟರ್ ಪೆಟ್ರೋಲ್ ರೂ.99.95 ಹಾಗೂ ಡೀಸೆಲ್ ರೂ.92.72 ಇತ್ತು. ಬಳಿಕ ರಾತ್ರಿ ದರ ಪರಿಷ್ಕೃತಗೊಂಡಿದ್ದು, ಶುಕ್ರವಾರಕ್ಕೆ ಅನ್ವಯಿಸುವಂತೆ ರೂ.100.23 ತಲುಪಿದೆ. ಈಗಾಗಲೇ ಖಾಸಗಿ ಪೆಟ್ರೋಲ್ ಬಂಕ್ ಗಳಲ್ಲಿ ಪೆಟ್ರೋಲ್ ದರ ಶತಕದ ಹೊಸ್ತಿಲು ದಾಟಿದೆ. 

ಈಗಾಗಲೇ ಕರ್ನಾಟಕದ ಹಲವು ನಗರಗಳಲ್ಲಿ ಪೆಟ್ರೋಲ್‌ ದರವು ರೂ. 100ಕ್ಕಿಂತ ಹೆಚ್ಚಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬೆಲೆ ಹೆಚ್ಚಿಸಿದ್ದು, ಮಹಾರಾಷ್ಟ್ರ, ರಾಜಸ್ಥಾನ, ದೆಹಲಿ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಪೆಟ್ರೋಲ್‌ ದರ ಶತಕ ತಲುಪಿದೆ.

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮೂಲಗಳ ಪ್ರಕಾರ ದೇಶದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 26 ರಿಂದ 27 ಪೈಸೆ ಮತ್ತು ಡೀಸೆಲ್ ದರ 28 ರಿಂದ 30 ಪೈಸೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಇದರಂತೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 96.99ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 87.75 ರೂ ಗೆ ಏರಿಕೆಯಾಗಿದೆ.

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 103.14ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 95.2ರೂ ಗೆ ಏರಿಕೆಯಾಗಿದೆ. ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 96.89ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 90.59 ರೂ ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 98.2ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 92.36 ರೂ ಗೆ ಏರಿಕೆಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com