ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಪೆಟ್ರೋಲ್ ದರ ಲೀಟರ್ ಗೆ 29 ಪೈಸೆ, ಡೀಸೆಲ್ 28 ಪೈಸೆ ಏರಿಕೆ

ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ ದರ ಪ್ರತೀ ಲೀಟರ್ ಗೆ 29 ಪೈಸೆ ಮತ್ತು ಡೀಸೆಲ್ ದರ 28 ಪೈಸೆಯಷ್ಟು ಏರಿಕೆಯಾಗಿದೆ.
ಪೆಟ್ರೋಲಿಯಂ ಉತ್ಪನ್ನ (ಸಾಂಕೇತಿಕ ಚಿತ್ರ)
ಪೆಟ್ರೋಲಿಯಂ ಉತ್ಪನ್ನ (ಸಾಂಕೇತಿಕ ಚಿತ್ರ)

ನವದೆಹಲಿ: ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ ದರ ಪ್ರತೀ ಲೀಟರ್ ಗೆ 29 ಪೈಸೆ ಮತ್ತು ಡೀಸೆಲ್ ದರ 28 ಪೈಸೆಯಷ್ಟು ಏರಿಕೆಯಾಗಿದೆ.

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಮಂಗಳವಾರ ದೇಶಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಪರಿಷ್ಕರಿಸಿದ್ದು, ಈ ಮೂಲಕ ದೇಶದ ಹಲವು ಜಿಲ್ಲೆಗಳಲ್ಲಿ ಪೆಟ್ರೋಲ್ ಹಾಗೂ  ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದೆ. 

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮೂಲಗಳ ಪ್ರಕಾರ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 27 ರಿಂದ 29 ಮತ್ತು ಡೀಸೆಲ್ ದರ 26 ರಿಂದ 28 ಪೈಸೆಯವರೆಗೂ ಏರಿಕೆಯಾಗಿದೆ. 

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 100.82 ರೂಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 92.72ರೂ ಗೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 97.56ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 88.29ರೂ.ಗೆ  ಏರಿಕೆಯಾಗಿದೆ.

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 103.69ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 95.77ರೂ ಗೆ ಏರಿಕೆಯಾಗಿದೆ. ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 97.44ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 91.13 ರೂ ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ  ಪ್ರತೀ ಲೀಟರ್ ಪೆಟ್ರೋಲ್ ದರ 98.7ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 92.88 ರೂ ಗೆ ಏರಿಕೆಯಾಗಿದೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com