ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಬೆಂಗಳೂರಿನ ಹೊಸ ದರ ಪಟ್ಟಿ ಇಲ್ಲಿದೆ!

ರಾಜ್ಯ ರಾಜಧಾನಿಯಲ್ಲಿ ತೈಲ ದರ ಗಗನಕ್ಕೇರಿದ್ದು, ಲೀಟರ್ ಪೆಟ್ರೋಲ್ ಸಾರ್ವಕಾಲಿಕ ದಾಖಲೆ ಬರೆದಿದೆ. ಸಿಲಿಕಾನ್ ಸಿಟಿಯಲ್ಲಿ ಗುರುವಾರ ಪೆಟ್ರೋಲ್ ದರ ರೂ.101.09ಕ್ಕೆ ಹಾಗೂ ಡೀಸೆಲ್ ದರ ರೂ.93.67ಕ್ಕೆ ಏರಿಕೆಯಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜಧಾನಿಯಲ್ಲಿ ತೈಲ ದರ ಗಗನಕ್ಕೇರಿದ್ದು, ಲೀಟರ್ ಪೆಟ್ರೋಲ್ ಸಾರ್ವಕಾಲಿಕ ದಾಖಲೆ ಬರೆದಿದೆ. ಸಿಲಿಕಾನ್ ಸಿಟಿಯಲ್ಲಿ ಗುರುವಾರ ಪೆಟ್ರೋಲ್ ದರ ರೂ.101.09ಕ್ಕೆ ಹಾಗೂ ಡೀಸೆಲ್ ದರ ರೂ.93.67ಕ್ಕೆ ಏರಿಕೆಯಾಗಿದೆ. 

ಗುರುವಾರ ಸರ್ಕಾರಿ ಬಂಕ್ ಗಳಲ್ಲಿ ಲೀಟರ್ ಪೆಟ್ರೋಲ್ ರೂ.100.82 ಹಾಗೂ ಡೀಸೆಲ್ ರೂ.93.6 ಇತ್ತು. ಬಳಿಕ ರಾತ್ರಿ ದರ ಪರಿಷ್ಕೃತಗೊಂಡಿದ್ದು, ಗುರುವಾರಕ್ಕೆ ಅನ್ವಯಿಸುವಂತೆ ರೂ.101.09 ತಲುಪಿದೆ. 

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮೂಲಗಳ ಪ್ರಕಾರ ದೇಶದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 26 ಪೈಸೆ ಮತ್ತು ಡೀಸೆಲ್ ದರ 7 ಪೈಸೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಇದರಂತೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 97.82ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 88.36 ರೂ ಗೆ ಏರಿಕೆಯಾಗಿದೆ.

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 103.94ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 95.85 ರೂ ಗೆ ಏರಿಕೆಯಾಗಿದೆ. ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 97.69ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 91.2 ರೂ ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 98.93ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 92.94ರೂ ಗೆ ಏರಿಕೆಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com