ನಿರ್ಮಲಾ ಸೀತಾರಾಮನ್ ಘೋಷಿಸಿದ 6.29 ಲಕ್ಷ ಕೋಟಿ ರೂ. ಕೊರೋನಾ ಪರಿಹಾರ ಪ್ಯಾಕೇಜ್‌ಗೆ ಸಚಿವ ಸಂಪುಟ ಅನುಮೋದನೆ

ಸಾಂಕ್ರಾಮಿಕ ಪೀಡಿತ ಆರ್ಥಿಕತೆಗೆ ಬೆಂಬಲ ನೀಡುವ ಸಲುವಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದ 6.29 ಲಕ್ಷ ಕೋಟಿ ರೂ.ಗಳ ಪರಿಹಾರ ಪ್ಯಾಕೇಜ್‌ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್

ನವದೆಹಲಿ: ಸಾಂಕ್ರಾಮಿಕ ಪೀಡಿತ ಆರ್ಥಿಕತೆಗೆ ಬೆಂಬಲ ನೀಡುವ ಸಲುವಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದ 6.29 ಲಕ್ಷ ಕೋಟಿ ರೂ.ಗಳ ಪರಿಹಾರ ಪ್ಯಾಕೇಜ್‌ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. 

ಕೋವಿಡ್ 19 ಸಾಂಕ್ರಾಮಿಕ ಪೀಡಿತ ಆರ್ಥಿಕತೆಯನ್ನು ಬೆಂಬಲಿಸುವ ಪ್ಯಾಕೇಜಿನ ಭಾಗವಾಗಿ, ಸೀತಾರಾಮನ್ ಸೋಮವಾರ ಸಣ್ಣ ಮತ್ತು ಮಧ್ಯಮ ವ್ಯವಹಾರಗಳಿಗೆ 1.5 ಲಕ್ಷ ಕೋಟಿ ರೂ.ಗಳ ಹೆಚ್ಚುವರಿ ಸಾಲ, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಹಣ, ಪ್ರವಾಸೋದ್ಯಮ ಸಂಸ್ಥೆಗಳು ಮತ್ತು ಮಾರ್ಗದರ್ಶಿಗಳಿಗೆ ಸಾಲ, ವಿದೇಶಿ ಪ್ರವಾಸಿಗರಿಗೆ ವೀಸಾ ಶುಲ್ಕ ಮನ್ನಾ. ಇದನ್ನು ಸಂಪುಟ ಸಭೆಯ ನಂತರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.

ನವೆಂಬರ್ ವರೆಗೆ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ಒದಗಿಸಲು ಈ ಹಿಂದೆ ಘೋಷಿಸಿದ 93,869 ಕೋಟಿ ರೂ. ಮತ್ತು ಹೆಚ್ಚುವರಿಯಾಗಿ 14,775 ಕೋಟಿ ರೂ. ನೀಡಲಾಗಿದೆ.

ಕೊರೋನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಉಂಟಾಗುವ ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಆರೋಗ್ಯ ಮೂಲಸೌಕರ್ಯಗಳನ್ನು ಸಿದ್ಧಪಡಿಸಲು ಆಸ್ಪತ್ರೆಗಳಲ್ಲಿ ಮಕ್ಕಳು ಮತ್ತು ಮಕ್ಕಳ ಆರೈಕೆಯನ್ನು ಸ್ಥಾಪಿಸಲು 23,220 ಕೋಟಿ ರೂಪಾಯಿಯನ್ನು ಹಣಕಾಸು ಸಚಿವರು ಘೋಷಿಸಿದ್ದಾರೆ.

1.ಆರೋಗ್ಯ ವಲಯಕ್ಕೆ 50,000 ಕೋಟಿ ರೂಪಾಯಿ, ಇತರ ವಲಯಗಳಿಗೆ 60,000 ಸಾವಿರ ಕೋಟಿ ರೂಪಾಯಿ
2. 1.5 ಲಕ್ಷ ಕೋಟಿ ರೂಪಾಯಿ ಹೆಚ್ಚುವರಿ ಮೊತ್ತ ಎಮರ್ಜೆನ್ಸಿ ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್
3. ಮೈಕ್ರೋಫೈನಾನ್ಸ್​ ಮೂಲಕ 25 ಲಕ್ಷ ಮಂದಿಗೆ ಒದಗಿಸುವ ವ್ಯಕ್ತಿಗಳಿಗೆ ಕ್ರೆಡಿಟ್​ ಗ್ಯಾರಂಟಿ ಯೋಜನೆ ಮೂಲಕ ಸಾಲ ಒದಗಿಸಲಾಗುತ್ತದೆ.
4.11,000ಕ್ಕೂ ಹೆಚ್ಚಯ ನೋಂದಾಯಿತ ಪ್ರವಾಸಿ ಗೈಡ್​ಗಳು/ಟ್ರಾವೆಲ್ ಮತ್ತು ಇತರ ಪ್ರವಾಸೋದ್ಯಮ ವಲಯದಲ್ಲಿ ತೊಡಗಿಕೊಂಡವರಿಗೆ ಶೇ.100ರಷ್ಡು ಸರ್ಕಾರಿ ಶೂರಿಟಿಯೊಂದಿಗೆ 10 ಲಕ್ಷ ರೂಗಳ ವರೆಗೆ ಸಾಲ ಒದಗಿಸಲಾಗುತ್ತದೆ. 
5. 5 ಲಕ್ಷ ಮಂದಿಗೆ ಉಚಿತ ವೀಸಾ ನೀಡುವ ಯೋಜನೆ.
6.ಹೊಸ ಸಾಲವನ್ನು ಕೇಂದ್ರೀಕರಿಸಲು ಕ್ರೆಡಿಟ್ ಗ್ಯಾರಂಟಿ ಯೋಜನೆ
7. ಮಧ್ಯಸ್ಥಗಾರರು ಮತ್ತು 1 ಲಕ್ಷ ರೂ.5,00,000 ಪ್ರವಾಸಿಗರಿಗೆ ಉಚಿತ ಪ್ರವಾಸಿ ವೀಸಾ. ಈ ಯೋಜನೆ 2022 ರ ಮಾರ್ಚ್ 31 ರವರೆಗೆ ಅನ್ವಯವಾಗಲಿದೆ.
8. ಆತ್ಮನಿರ್ಭಾರ ಭಾರತ್ ರೊಜ್ಗರ್ ಯೋಜನೆಯ ವಿಸ್ತರಣೆಯನ್ನು ಸರ್ಕಾರ ಪ್ರಕಟಿಸಿದೆ
9. ಮಕ್ಕಳು ಮತ್ತು ಮಕ್ಕಳ ಆರೈಕೆಯ ಬಗ್ಗೆ ಪ್ರಾಥಮಿಕ ಗಮನಹರಿಸಿ ಸಾರ್ವಜನಿಕ ಆರೋಗ್ಯಕ್ಕಾಗಿ 23,220 ಕೋಟಿ ರೂ ಘೋಷಣೆ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com