ಸಾಲು ಸಾಲು ರಜೆ: ಮಾರ್ಚ್ 15 ಮತ್ತು 16 ರಂದು ಬ್ಯಾಂಕ್ ನೌಕರರ ಮುಷ್ಕರ

ಸಾರ್ವಜನಿಕ ವಲಯದ ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಎಸ್ ಬಿ ಐ ನೇತೃತ್ವದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಮಾರ್ಚ್ 15 ಮತ್ತು 16 ರಂದು ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.

Published: 12th March 2021 09:55 AM  |   Last Updated: 12th March 2021 12:36 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : Shilpa D
Source : Online Desk

ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಎಸ್ ಬಿ ಐ ನೇತೃತ್ವದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಮಾರ್ಚ್ 15 ಮತ್ತು 16 ರಂದು ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.

ಬ್ಯಾಂಕಿಂಗ್ ಕೆಲಸ ಕಾರ್ಯಗಳನ್ನು ಮುಗಿಸಿಕೊಳ್ಳುವುದಕ್ಕೆ ಗ್ರಾಹಕರಿಗೆ ಉಳಿದಿರುವುದು ಇನ್ನೊಂದೇ ದಿನವಷ್ಟೇ. ಶುಕ್ರವಾರ ಕೈ ತಪ್ಪಿದರೆ ಇನ್ನೂ ನಾಲ್ಕು ದಿನಗಳ ಕಾಲ ಯಾವುದೇ ಬ್ಯಾಂಕಿಂಗ್ ಸೇವೆಗಳು ಸಿಗುವುದು ಅನುಮಾನವಾಗಿದೆ.

ಇತ್ತೀಚಿಗೆ ನಡೆದ ಸಂಧಾನ ಸಭೆಯಲ್ಲಿ ಯಾವುದೇ ರೀತಿ ಸಕಾರಾತ್ಮಕ ಸ್ಪಂದನೆ ಸಿಕ್ಕಿರಲಿಲ್ಲ. ಈ ಹಿನ್ನೆಲೆ ಮಾರ್ಚ್ 15 ಮತ್ತು 16 ರಂದು ಸುಮಾರು 10 ಲಕ್ಷ ಬ್ಯಾಂಕ್ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (ಎಐಬಿಇಎ) ತಿಳಿಸಿದೆ. ಇದಲ್ಲದೆ, ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ನಿರ್ಧಾರ ಮರುಪರಿಶೀಲಿಸಲು ಒಂದು ವೇಳೆ ಸರ್ಕಾರವು ಒಪ್ಪಿದರೆ ಮುಷ್ಕರವನ್ನು ಮರುಪರಿಶೀಲಿಸುವುದಾಗಿ ಬ್ಯಾಂಕ್ ನೌಕರರ ಸಂಘಟನೆಗಳು ಹೇಳಿವೆ.

ಮಾರ್ಚ್ 15 ಮತ್ತು 16ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ. ಆದರೆ ಅದಕ್ಕೂ ಎರಡು ದಿನಕ್ಕೆ ಮೊದಲೇ ಬ್ಯಾಂಕಿಂಗ್ ಸೇವೆಗಳು ಅಲಭ್ಯವಾಗಲಿವೆ. ಏಕೆಂದರೆ ಮಾರ್ಚ್.13 ಎರಡನೇ ಶನಿವಾರವಾಗಿದ್ದು, ಮಾರ್ಚ್.14 ಭಾನುವಾರದ ಕಾರಣ ಬ್ಯಾಂಕ್ ರಜೆ ಇರುತ್ತದೆ. ಅದಾಗಿ ಎರಡು ದಿನಗಳವರೆಗೂ ಬ್ಯಾಂಕ್ ನೌಕರರ ಒಕ್ಕೂಟ ಮುಷ್ಕರಕ್ಕೆ ಕರೆ ಕೊಟ್ಟಿವೆ.


Stay up to date on all the latest ವಾಣಿಜ್ಯ news
Poll
lokasbha

ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಸಂಸದರಿಗೆ ದಂಡ ವಿಧಿಸಬೇಕೇ?


Result
ಹೌದು, ಇವರಿಂದ ಸಮಯ ವ್ಯರ್ಥ
ಬೇಡ, ಅವರು ಪ್ರತಿಭಟಿಸಬೇಕು
flipboard facebook twitter whatsapp