ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಇಂದಿನ ಪೆಟ್ರೋಲ್, ಡೀಸೆಲ್ ದರ ಇಂತಿದೆ...

ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 28 ರಿಂದ 29 ಪೈಸೆ ಮತ್ತು ಡೀಸೆಲ್ ದರ 26 ರಿಂದ 28 ಪೈಸೆ ಏರಿಕೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 28 ರಿಂದ 29 ಪೈಸೆ ಮತ್ತು ಡೀಸೆಲ್ ದರ 26 ರಿಂದ 28 ಪೈಸೆ ಏರಿಕೆಯಾಗಿದೆ.

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಭಾನುವಾರ ದೇಶಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಹೆಚ್ಚಿಸಿದ್ದು, ಈ ಮೂಲಕ ಪೆಟ್ರೋಲ್ ಹಾಗೂ  ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದೆ. 

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮೂಲಗಳ ಪ್ರಕಾರ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 28 ರಿಂದ 29 ಪೈಸೆ ಮತ್ತು ಡೀಸೆಲ್ ದರ 26 ರಿಂದ 28 ಪೈಸೆ ಏರಿಕೆಯಾಗಿದೆ. 

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 97.43ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 90.33ರೂ ಗೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 94.29ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 85.21ರೂ ಗೆ ಏರಿಕೆಯಾಗಿದೆ.

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 100.53ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 92.5ರೂ ಗೆ ಏರಿಕೆಯಾಗಿದೆ. ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 94.3ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 88.05 ರೂ ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 95.81ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 89.95 ರೂ ಗೆ ಏರಿಕೆಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com