ಸತತ ಮೂರು ದಿನಗಳಿಂದ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ: ಇಂದಿನ ದರ ಇಷ್ಟಿದೆ
ದೀಪಾವಳಿ ಹಬ್ಬಕ್ಕೆ ಮುನ್ನ ತೈಲ ದರ ಏರಿಕೆ ಕಂಡುಬರುತ್ತಲೇ ಇದೆ. ಕಳೆದ ಮೂರು ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ಸತತ ಏರಿಕೆಯಾಗುತ್ತಿದ್ದು, ತಿಂಗಳ ಆರಂಭದಲ್ಲಿಯೇ ಗ್ರಾಹಕರ ಜೇಬಿಗೆ ಮತ್ತಷ್ಟು ಭಾರ ಬಿದ್ದಿದೆ.
Published: 01st November 2021 07:26 AM | Last Updated: 01st November 2021 07:26 AM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ದೀಪಾವಳಿ ಹಬ್ಬಕ್ಕೆ ಮುನ್ನ ತೈಲ ದರ ಏರಿಕೆ ಕಂಡುಬರುತ್ತಲೇ ಇದೆ. ಕಳೆದ ಮೂರು ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ಸತತ ಏರಿಕೆಯಾಗುತ್ತಿದ್ದು, ತಿಂಗಳ ಆರಂಭದಲ್ಲಿಯೇ ಗ್ರಾಹಕರ ಜೇಬಿಗೆ ಮತ್ತಷ್ಟು ಭಾರ ಬಿದ್ದಿದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.
ಇಂದಿನ ದರವೆಷ್ಟು?: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ ಮತ್ತು ಲೀಟರ್ ಡೀಸೆಲ್ ದರದಲ್ಲಿ ಕ್ರಮವಾಗಿ 35 ಪೈಸೆ ಹೆಚ್ಚಳವಾಗಿದೆ. ಇದರಂತೆ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 109 ರೂಪಾಯಿ 69 ಪೈಸೆಗೆ ಏರಿಕೆಯಾಗಿದ್ದು, ಡೀಸೆಲ್ ದರ ಸಹ 100ರ ಗಡಿ ತಲುಪಿ 98 ರೂಪಾಯಿ 42 ಪೈಸೆಯಾಗಿದೆ. ಇಂಧನ ದರ ಗರಿಷ್ಠ ಮಟ್ಟ ತಲುಪಿದೆ.
ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 115 ರೂಪಾಯಿ 50 ಪೈಸೆಯಾಗಿದ್ದು, ಡೀಸೆಲ್ ದರ 106 ರೂಪಾಯಿ 62 ಪೈಸೆಯಾಗಿದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 110 ರೂಪಾಯಿ 15 ಪೈಸೆಯಾಗಿದ್ದು, ಡೀಸೆಲ್ ದರ 101 ರೂಪಾಯಿ 56 ಪೈಸೆಯಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 106 ರೂಪಾಯಿ 35 ಪೈಸೆಯಾಗಿದ್ದು, ಡೀಸೆಲ್ ಬೆಲೆ 102 ರೂಪಾಯಿ 59 ಪೈಸೆಯಾಗಿದೆ.
ಇನ್ನು ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್ ಗೆ 113 ರೂಪಾಯಿ 50 ಪೈಸೆಯಾಗಿದ್ದು, ಡೀಸೆಲ್ ಬೆಲೆ 104 ರೂಪಾಯಿ 41 ಪೈಸೆಯಾಗಿದೆ.