ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಪೆಟ್ರೋಲ್ 30 ಪೈಸೆ, ಡೀಸೆಲ್ 38 ಪೈಸೆ ಹೆಚ್ಚಳ!

ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ 26 ರಿಂದ 30 ಪೈಸೆಗಳಷ್ಟು ಮತ್ತು ಡೀಸೆಲ್ ದರ 35 ರಿಂದ 38 ಪೈಸೆ ಏರಿಕೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ 26 ರಿಂದ 30 ಪೈಸೆಗಳಷ್ಟು ಮತ್ತು ಡೀಸೆಲ್ ದರ 35 ರಿಂದ 38 ಪೈಸೆ ಏರಿಕೆಯಾಗಿದೆ.

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಗುರುವಾರ ದೇಶಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಹೆಚ್ಚಿಸಿದ್ದು, ಈ ಮೂಲಕ ಪೆಟ್ರೋಲ್ ಹಾಗೂ  ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದೆ. 

ಇಂದು ದರ ಏರಿಕೆಯ ಬಳಿಕ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 103.24 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.77 ರೂಪಾಯಿಗೆ ಏರಿಕೆ ಆಗಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.25 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 99.55 ರೂಪಾಯಿಗೆ ಏರಿಕೆ ಆಗಿದೆ. ಇನ್ನು, ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 100.75 ರೂಪಾಯಿ ಆಗಿದ್ದರೆ, ಲೀಟರ್ ಡೀಸೆಲ್ ದರ 96.26 ರೂಪಾಯಿಗೆ ಏರಿಕೆಯಾಗಿದೆ.

ಮಧ್ಯಪ್ರದೇಶದ, ರಾಜಸ್ಥಾನ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಒಡಿಶಾ, ಲಡಾಕ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಈಗಾಗಲೇ ಲೀಟರ್ ಪೆಟ್ರೋಲ್ ಬೆಲೆ 100ರ ಗಡಿಯಾಚೆಗೆ ಇದೆ. ಬಳಿಕ ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕಾಣುತ್ತಿರುವುದು ಗ್ರಾಹಕರಿಗೆ ನಿರಾಸೆ ಮೂಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com