ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಪೆಟ್ರೋಲ್ 35 ಪೈಸೆ, ಡೀಸೆಲ್ 37 ಪೈಸೆ ಹೆಚ್ಚಳ!

ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ 35 ಪೈಸೆಗಳಷ್ಟು ಮತ್ತು ಡೀಸೆಲ್ ದರ 37 ಪೈಸೆ ಏರಿಕೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ 35 ಪೈಸೆಗಳಷ್ಟು ಮತ್ತು ಡೀಸೆಲ್ ದರ 37 ಪೈಸೆ ಏರಿಕೆಯಾಗಿದೆ.

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಶನಿವಾರ ದೇಶಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಹೆಚ್ಚಿಸಿದ್ದು, ಈ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದೆ. 

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 108.80ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 99.63 ರೂ ಗೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 105.49ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 94.22ರೂ ಗೆ ಏರಿಕೆಯಾಗಿದೆ.

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ ರೂ.111.09 ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 101.78 ರೂ ಗೆ ಏರಿಕೆಯಾಗಿದೆ. ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 105.76ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 96.98 ರೂ ಗೆ ಏರಿಕೆಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com